ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು

Edited By:

Updated on: Oct 15, 2024 | 7:50 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಜಾಮೀನು ಸಿಗದೇ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದಾರೆ. ಇನ್ನು ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿ ಮಠದ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಅದು ಇಲ್ಲಿದೆ.

ಚಿಕ್ಕಬಳ್ಳಾಪುರ, (ಅಕ್ಟೋಬರ್ 15): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ಬಿಗ್ ಶಾಕ್ ಆಗಿದೆ. ಇನ್ನು ಜಾಮೀನಿಗಾಗಿ ದರ್ಶನ್​ ಪರ ವಕೀಲರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದರ ಮಧ್ಯ ಚಿಕ್ಕಬಳ್ಳಾಪುರದಲ್ಲಿ ಕೋಡಿಶ್ರೀ ದರ್ಶನ್​ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಪಾಪದ ಪಾಷಣ ಕಳೆಯಬೇಕಿದೆ. ತಾನು ಮಾಡಿದ ಕರ್ಮ ಫಲವತ್ತಾದ್ರೆ ಯಾರೇನು ಮಾಡುವರು. ಪಾಪದ ಕೆಲಸ ಮಾಡುವುದಕ್ಕೆ ಹೆದರಬೇಕಿತ್ತು ಎಂದಿದ್ದಾರೆ.

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More