Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ ಭವಿಷ್ಯ

ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ ಭವಿಷ್ಯ

ರಮೇಶ್ ಬಿ. ಜವಳಗೇರಾ
|

Updated on: Mar 02, 2025 | 2:28 PM

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗ ಹಲವು ದಿನಗಳಿಂದ ಜೋರಾಗುತ್ತಿದೆ. ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಲೇಬೆಕೆಂದು ಡಿಕೆ ಶಿವಕುಮಾರ್, ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕೆ ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಡಿಕೆ ಶಿವಕುಮಾರ್ ಅವರ ನಡೆ, ನುಡಿಗಳು ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇದರ ಮಧ್ಯ ಕೋಡಿಶ್ರೀ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ.

ಯಾದಗಿರಿ, (ಮಾರ್ಚ್ 02): ಕರ್ನಾಟಕದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ನಡೆದಿವೆ. ಡಿಕೆ ಶಿವಕುಮಾರ್ ಅವರ ಬಣದ ನಾಯಕರು ಸಿದ್ದರಾಮಯ್ಯನವರನ್ನು ಬದನಾವಣೆ ಮಾಡಬೇಕು. ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಇನ್ನು ಈ ರಾಜಕೀಯ ಮುಸುಕಿನ ಗುದ್ದಾಟದ ನಡುವೆ ಕೋಡಿಶ್ರೀ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯನವರನ್ನು ಬದಲಾವಣೆ ಮಾಡುವುದು ಅಷ್ಟು ಸುಲಭವಲ್ಲ ಎಂದಿದ್ದಾರೆ.

ಯಾದಗಿರಿಯಲ್ಲಿಂದು ಮಾತನಾಡಿರುವ ಕೋಡಿಹಳ್ಳಿ ಶ್ರೀಗಳು, ಎಲ್ಲಾ ಸಮುದಾಯದ ಎಲ್ಲಾ ಜಾತಿ ಎಲ್ಲಾ ವರ್ಗದವರು ಈ ಭೂಮಿ ಮೇಲೆ ವಾಸವಿದ್ದಾರೆ. ಪ್ರಾಚೀನ ಕಾಲದಿಂದಲೂ ಹಾಲಮತ ಸಮಾಜ ಅಂತ ಆಂದ್ರೆ ಅಡವಿಯಲ್ಲಿದ್ದು ಕುರಿಗಳನ್ನ ಸಾಕೋದು ಮಾಡ್ತಾರೆ. ಕುರಿಯ ಇಕ್ಕಿಯಲ್ಲಿ ಲಿಂಗವನ್ನ ಕಂಡವರು. ಪ್ರಕೃತಿ ಮೇಲೆ ಗಾಳಿಯ ಮೇಲೆ ಭೂಮಿಯ ಮೇಲೆ ಅವರು ಅಡವಿಯಲ್ಲಿ ಇದ್ದು ಕಂಡದ್ದು ನೋಡಿದ್ದ ಅನುಭವಸಿದ್ದನ್ನ ಹೇಳುತ್ತಾ ಬಂದಿದ್ದಾರೆ ಅದು ಕುರುವಿನ ರಟ್ಟು. ಹಾಲು ಕೆಟ್ಟರು ಹಾಲಮತ ಸಮಾಜ ಕೆಡುವುದಿಲ್ಲ ಅಂತ ಹೇಳುತ್ತಾರೆ. ಇವತ್ತು ಹಾಲಮತ ಸಮಾಜದವರ ಕೈಯಲ್ಲಿ ರಾಜ್ಯದ ಅಧಿಕಾರವಿದೆ. ಬಿಡಿಸಿಕೊಳ್ಳೋದು ಅಷ್ಟು ಸುಲಭವಲ್ಲ. ಅವರಾಗೇ ಬಿಡಬೇಕು. ನೀವು ಬಿಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಮುಂದೆ ಏನಾಗುತ್ತೆ ಎಂದು ಯುಗಾದಿ ಮೇಲೆ ಹೇಳುತ್ತೇನೆ ಎಂದು ಹೇಳಿದ್ದಾರೆ.