Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾಣದಲ್ಲಿ ಪಿಶಾಚಿ ಕುಣಿದಂತೆ ಆಗುತ್ತೆ -ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ಹೇಳಿದ ಕೋಡಿಮಠ ಸ್ವಾಮೀಜಿ

ಸ್ಮಶಾಣದಲ್ಲಿ ಪಿಶಾಚಿ ಕುಣಿದಂತೆ ಆಗುತ್ತೆ -ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ಹೇಳಿದ ಕೋಡಿಮಠ ಸ್ವಾಮೀಜಿ

ಸಾಧು ಶ್ರೀನಾಥ್​
|

Updated on:Aug 17, 2023 | 1:57 PM

Kodi Mata Bhavishya: ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಾಜಾ ಭವಿಷ್ಯ: ಮಳೆ, ಗುಡುಗು, ಭೂಮಿ ಬಿರುಕು ಬಿಡುವುದು, ದ್ವೇಷ ಹೆಚ್ಚಾಗುವುದು, ಅಪಮೃತ್ಯು ಎಲ್ಲ ಹೆಚ್ಚಾಗಲಿವೆ. ಪ್ರಕೃತಿಯಿಂದಲೂ ಹಾನಿ ಇದೆ. ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗಲಿದೆ. ಶ್ರಾವಣದ‌ ಮಧ್ಯಭಾಗದ ನಂತರ ಕಾರ್ತಿಕದವರೆಗೂ ಮಳೆಯಾಗಲಿದೆ. ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಾ ಇದೆ. ಆದರೆ ಏನೂ ಆಗುವುದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ ಎಂದು ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ.

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆಯೇ? ಈ ಪ್ರಶ್ನೆಗೆ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಬುಧವಾರ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರಕ್ಕೆ ಏನೂ ತೊಂದರೆಯಿಲ್ಲ. ಆದರೆ, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ಇಲ್ಲವೋ ಎಂಬುದು 2024ರ ಲೋಕಸಭೆ ಚುನಾವಣೆಯ (Lok Sabha Election 2024) ನಂತರ ತೀರ್ಮಾನ ಆಗಲಿದೆ ಎಂದು ಅವರು ಹೇಳಿದ್ದಾರೆ. ಇದರೊಂದಿಗೆ, ಲೋಕಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಆಗಬಹುದು ಎಂಬ ಸುಳಿವು ನೀಡಿದ್ದಾರೆ (Kodi Mutt Swamiji Prediction).

ಮಳೆ, ಗುಡುಗು, ಭೂಮಿ ಬಿರುಕು ಬಿಡುವುದು, ದ್ವೇಷ ಹೆಚ್ಚಾಗುವುದು, ಅಪಮೃತ್ಯು ಎಲ್ಲ ಹೆಚ್ಚಾಗಲಿವೆ. ಪ್ರಕೃತಿಯಿಂದಲೂ ಹಾನಿ ಇದೆ. ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗಲಿದೆ. ಶ್ರಾವಣದ‌ ಮಧ್ಯಭಾಗದ ನಂತರ ಕಾರ್ತಿಕದವರೆಗೂ ಮಳೆಯಾಗಲಿದೆ. ಮತ್ತೆ ಮಳೆಯಿಂದ ಅಪಾಯ ಆಗುವ ಲಕ್ಷಣಗಳಿವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗುತ್ತಾ ಇದೆ. ಆದರೆ ಏನೂ ಆಗುವುದಿಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ ಎಂದು ಸ್ವಾಮೀಜಿ ಮಾರ್ಮಿಕವಾಗಿ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 17, 2023 01:56 PM