ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ರಾಜ್ಯ ರಾಜಕಾರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಈ ರೀತಿ ಗಂಭೀರ ಆರೋಪದಲ್ಲಿ ಸಿಲುಕಿಕೊಂಡಿದ್ದಾರೆ. ಇನ್ನು ಮುಡಾ ಹಗರಣ ಸಂಬಂಧ ಸಿಎಂ ವಿರುದ್ಧದ ಲೋಕಾಯುಕ್ತ ತನಿಖೆ ನಡೆಸಿದ್ದು, ಇದರ ಮಧ್ಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕರ್ನಾಟಕ ರಾಜ್ಯ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಚಿಕ್ಕಬಳ್ಳಾಪುರ, (ಅಕ್ಟೋಬರ್ 15): ಮುಡಾ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸಿದೆ. ಆದರೂ ಸಹ ಈ ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯನವರಿಗೆ ಟೆನ್ಷನ್ ಶುರುವಾಗಿದೆ. ಒಂದೆಡೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದರ ಮಧ್ಯ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಇಂದು (ಅಕ್ಟೋಬರ್ 15) ಚಿಕ್ಕಬಳ್ಳಾಪುರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕೋಡಿಶ್ರೀ, ರಾಜ್ಯ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಮುಖ್ಯಮಂತ್ರಿಗಳ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ರಾಜ ಗೆಲ್ಲುತ್ತಾನೆ. ಆದ್ರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪ ದಿನ ರಾಜಕೀಯ ಏರಪೇರು ನಡೆಯುತ್ತೆ ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

