ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ

Edited By:

Updated on: Oct 01, 2025 | 9:36 PM

ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದ ಬಗ್ಗೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸದ್ಯ ರಾಜ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಉಳಿದದ್ದು ಸಂಕ್ರಾಂತಿ ಮುಗಿದ ಬಳಿಕವೇ ನೋಡಿ ಹೇಳಬೇಕು ಎಂದು ಧಾರವಾಡದಲ್ಲಿ ಸ್ವಾಮೀಜಿ ತಿಳಿಸಿದ್ದಾರೆ.

ಧಾರವಾಡ, ಅಕ್ಟೋಬರ್​ 01: ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ (Dharwad) ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ‌ವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ. ಉಳಿದದ್ದು ಸಂಕ್ರಾಂತಿ ಆದ ಮೇಲೆ ನೋಡಿ ಹೇಳಬೇಕು ಎಂದಿದ್ದಾರೆ. ಬಯಲು ಸೀಮೆಯಲ್ಲಿ ಮಲೆನಾಡು ಮಳೆ ಎಂದು ಈ ಹಿಂದೆ ಹೇಳಿದ್ದೆ. ಮಲೆನಾಡು ಬಯಲುಸೀಮೆ ಆಗಿದೆ, ಬಯಲುಸೀಮೆ ಮಲೆನಾಡು ಆಗಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More