ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: 30 ಅರ್ಹ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

Edited By:

Updated on: Mar 18, 2026 | 4:35 PM

ಕೋಗಿಲು ಬಡಾವಣೆಯಲ್ಲಿ 30 ಅರ್ಹ ನಿರಾಶ್ರಿತರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. 61 ಕುಟುಂಬಗಳನ್ನು ಗುರುತಿಸಲಾಗಿದ್ದು, 12 ಮಂದಿಗೆ ಹಕ್ಕುಪತ್ರ ನೀಡಲಾಗಿದೆ. ದಾಖಲೆ ಸಲ್ಲಿಕೆ ಪ್ರಕ್ರಿಯೆಯಲ್ಲಿರುವ 19 ಕುಟುಂಬಗಳು ಮತ್ತು ಇನ್ನೂ ಮುಂದೆ ಬರದ 30 ಕುಟುಂಬಗಳಿಗೆ ವಸತಿ ಇಲಾಖೆ ಮನವಿ ಮಾಡಿದೆ. 189 ಸಾಮಾನ್ಯ ಅರ್ಜಿದಾರರಿಗೂ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ.

ಬೆಂಗಳೂರು, ಮಾರ್ಚ್​ 18: ಕೋಗಿಲು ನಿರಾಶ್ರಿತರಿಗೆ ಕೊನೆಗೂ ನಿವೇಶನ ಭಾಗ್ಯ ದೊರೆತಿದೆ. ಮೂರ್ನಾಲ್ಕು ತಿಂಗಳ ಬಳಿಕ 30 ಅರ್ಹ ನಿವಾಸಿಗಳಿಗೆ ಸಚಿವರಾದ ಕೃಷ್ಣಬೈರೇಗೌಡ ಮತ್ತು ಜಮೀರ್ ಅಹ್ಮದ್‌ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆ ಮೂಲಕ ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ಮತ್ತು ರಂಜಾನ್​​ ಹಬಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಹಕ್ಕುಪತ್ರ ಪಡೆದವರಲ್ಲಿ ಸಾಮಾನ್ಯ ವರ್ಗದ 10 ಕುಟುಂಬಗಳಿಗೆ ಆದ್ಯತೆ ನೀಡಲಾಗಿದೆ. ಪರಿಶಿಷ್ಟ ಜಾತಿಯ 7 ಕುಟುಂಬ, ಪರಿಶಿಷ್ಟ ಪಂಗಡದ 2 ಕುಟುಂಬ, ಅಲ್ಪಸಂಖ್ಯಾತ ಸಮುದಾಯದ 10 ಕುಟುಂಬಗಳು ಸೇರಿದಂತೆ ಒಟ್ಟು 30 ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More