AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಕೋಗಿಲು ಬಡಾವಣೆ ತೆರವು: ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

ಅಕ್ಷಯ್​ ಪಲ್ಲಮಜಲು​​
|

Updated on:Dec 27, 2025 | 4:47 PM

Share

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿದೆ. 2021ರಿಂದ ಅನಾಥರೈಸ್ಡ್ ಆಗಿದ್ದ ಈ ವಸತಿಗಳು ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದವು. ನೋಟಿಸ್ ನೀಡಿದರೂ ಖಾಲಿ ಮಾಡದ ಕಾರಣ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸಿಎಂ ಸಿದ್ಧರಾಮಯ್ಯ ಮಾನವೀಯ ದೃಷ್ಟಿಯಿಂದ ವಲಸಿಗ ನಿವಾಸಿಗಳಿಗೆ ಪರ್ಯಾಯ ಜಾಗ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು, ಡಿ.27: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ನಡೆದ ಅನಧಿಕೃತ ಮನೆಗಳ ತೆರವು ಕಾರ್ಯಾಚರಣೆ ಹಲವು ಕುಟುಂಬಗಳನ್ನು ನಿರ್ಗತಿಕರನ್ನಾಗಿ ಮಾಡಿದೆ. 2021ರಿಂದಲೂ ಈ ಪ್ರದೇಶದಲ್ಲಿನ ನಿವಾಸಿಗಳು ಅನಧಿಕೃತವಾಗಿ ನೆಲೆಸಿದ್ದರು. ಈ ವಸತಿಗಳು ಐದು ಎಕರೆ ವಿಸ್ತೀರ್ಣದ ತ್ಯಾಜ್ಯ ನಿರ್ವಹಣಾ ಸ್ಥಳದ ಸಮೀಪದಲ್ಲಿದ್ದ ಕಾರಣ ಸುರಕ್ಷತೆಗೆ ಅಪಾಯವನ್ನುಂಟುಮಾಡುತ್ತಿದ್ದವು. ನಿವಾಸಿಗಳಿಗೆ ಈ ಹಿಂದೆ ನೋಟಿಸ್ ನೀಡಿದ್ದರೂ, ಅವರು ಜಾಗ ಖಾಲಿ ಮಾಡಿರಲಿಲ್ಲ. ಇದಾದ ಬಳಿಕ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕಮಿಷನರ್ ಮತ್ತು ಸೆಕ್ರೆಟರಿಗಳೊಂದಿಗೆ ಮಾತನಾಡಿ, ತೆರವುಗೊಂಡ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಅವರಲ್ಲಿ ಹೆಚ್ಚಿನವರು ವಲಸಿಗರು. ಬೇರೆ ಕಡೆಯಿಂದ ಬಂದಿರುವವರು. ನಾವು ಮಾನವೀಯತೆ ದೃಷ್ಟಿಯಿಂದ ಅವರಿಗೆ ಪರ್ಯಾಯವಾಗಿ ಜಾಗ ನೀಡಿ, ವಸತಿ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 27, 2025 04:45 PM