ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್, ಶೀಟ್ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ತಾತ್ಕಾಲಿಕ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ.
ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್ ಹಾಗೂ ಶೀಟ್ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಹೌದು.. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ತಾತ್ಕಾಲಿಕ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ.
ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಯಾವುದೇ ನೋಟಿಸ್ ನೀಡಿದ ಏಕಾಏಕಿ ಬಂದು ಮನೆ ಕೆಡವಿದ್ದಾರೆ ಎಂದು ಆಕ್ರೋಶಗೊಂಡಿದ್ದು, ಇಂದು (ಡಿಸೆಂಬರ್ 21) ಸಹಕಾರ ನಗರ ಬಳಿ ಇರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆ ಕಳೆದುಕೊಂಡ ನಿವಾಸಿಗಳಿಂದ ಸ್ಥಳೀಯ ಕೃಷ್ಣಬೈರೇಗೌಡ ಮನೆ ಬಳಿ ಜಮಾಯಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಣ ಮಾಡಲು ಪೊಲೀಸರ ಹರಸಾಹಸಪಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

