Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ದಂಧೆ ಆರೋಪ: ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ದಾಳಿ

ಕಮಿಷನ್ ದಂಧೆ ಆರೋಪ: ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತರ ನೇತೃತ್ವದಲ್ಲಿ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ದಾಳಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma

Updated on: Mar 10, 2025 | 10:11 AM

ಕೋಲಾರ ಎಪಿಎಂಸಿಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಉಪಲೋಕಾಯುಕ್ತರು ದಾಳಿ ನಡೆಸಿದ್ದಾರೆ. ರೈತರು ತರುವ ತರಕಾರಿಗಳಿಗೆ ಶೇ 8ರಷ್ಟು ಕಮಿಷನ್ ಪಡೆಯುವ, 3 ರಿಂದ 5 ಕೆಜಿ ತರಕಾರಿ ಕಡಿತಗೊಳಿಸುವ ಬಗ್ಗೆ ರೈತರ ಆರೋಪದ ಕಾರಣ ಈ ದಾಳಿ ನಡೆದಿದೆ.

ಕೋಲಾರ, ಮಾರ್ಚ್ 10: ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ಆರೋಪಗಳ ಕಾರಣ ಉಪಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ. ಇದೇ ವೇಳೆ, ಹಳೆಯ ತೂಕ ಮಾಡುವ ಮಾಪನ ಕಂಡು ಉಪಲೋಕಾಯುಕ್ತರು ಗರಂ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ