ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಪಾರಿ ಕಿಲ್ಲರ್ಸ್ ಅರೆಸ್ಟ್
ಬೆಂಗಳೂರಿನಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿವೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದ ನಾಲ್ವರು ಸಿಕ್ಕಿಬಿದ್ದಿದ್ದು, ಎಸಿಪಿ ರಂಗಪ್ಪ ನೇತೃತ್ವದ ತಂಡ ನಾಲ್ವರು ಹಂತಕರನ್ನು ಬಂದಿಸಿದೆ. ಇನ್ನು ಬಿಕ್ಲು ಶಿವ ಕೊಲೆಯಾಗಲು ಪ್ರಮುಖ ಕಾರಣ ಏನು ಎನ್ನುವುದನ್ನೂ ಸಹ ಪೊಲೀಸರು ಪತ್ತೆ ಮಾಡಿದ್ದಾರೆ.
ಬೆಂಗಳೂರು, (ಜುಲೈ 22): ರೌಡಿಶೀಟರ್ ಶಿವಪ್ರಕಾಶ್ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದ ನಾಲ್ವರನ್ನ ಪೊಲೀಸರು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಬಂಧಿಸುವಲ್ಲಿ ಎಸಿಪಿ ರಂಗಪ್ಪ ನೇತೃತ್ವದ ತಂಡ ಯಶಸ್ವಿಯಾಗಿದೆ. ಬಂಧಿತ ವಿಮಲ್ ಮೂಲಕ ನರಸಿಂಹ ಎನ್ನುವಾತ ಒಂದೂವರೆ ಲಕ್ಷ ರೂಪಾಯಿಗೆ ಬಿಕ್ಲು ಶಿವ ಕೊಲೆಗೆ ಸುಪಾರಿ ಪಡೆದಿರುವುದು ವಿಚಾರಣೆ ವೇಳೆ ಗೊತ್ತಾಗಿದೆ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

