ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಬಸ್, 20 ಜನ ಸ್ವಲ್ಪದರಲ್ಲೇ ಬಚಾವ್
ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಕಾರಣ 8 ಮಂದಿ ಗಾಯಗೊಂಡ ಘಟನೆ ಕೆಜಿಎಫ್ನ ಬೆಮೆಲ್ ನಗರ ಬಳಿ ಸಂಭವಿಸಿದೆ. ಅದೃಷ್ಟವಶಾತ್, ಬಸ್ನಲ್ಲಿದ್ದ 20 ಮಂದಿ ಜಸ್ಟ್ ಬಚಾವಾಗಿದ್ದಾರೆ. ಆದಾಗ್ಯೂ, 8 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕೋಲಾರ, ಜೂನ್ 25: ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಗೆ ಸೇರಿದ ಬಸ್ ಅಪಘಾತಕ್ಕೀಡಾಗಿ 8 ಮಂದಿ ಗಾಯಗೊಂಡಿದ್ದಾರೆ. ಕೆಜಿಎಫ್ನ ಬೆಮೆಲ್ ನಗರ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ನಲ್ಲಿ 20 ಜನ ಇದ್ದರು. ಅದೃಷ್ಟವಶಾತ್, ಬಸ್ನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಾಳುಗಳನ್ನು ಕೆಜಿಎಫ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲ ಪಾಳಿಯ ಕಾರ್ಮಿಕರನ್ನು ಕರೆದುಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿದೆ.