ಕೋಲಾರ: ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು, ಸಿಸಿಟಿವಿಲಿ ಸೆರೆಯಾಯ್ತು ಖದೀಮರ ಕೈಚಳಕ

Edited By:

Updated on: May 14, 2026 | 9:49 AM

ಕೋಲಾರದ ಬೇತಮಂಗಲದಲ್ಲಿ ಬ್ಯಾಂಕ್‌ನಿಂದ ಹಣ ತರುತ್ತಿದ್ದ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಬೈಕ್ ಬಾಕ್ಸ್​ನಲ್ಲಿದ್ದ ಒಂದು ಲಕ್ಷ ರೂ. ದೋಚಿದ ಕಳ್ಳರನ್ನು ಸಾರ್ವಜನಿಕರು ಬೆನ್ನಟ್ಟಿ ಹಿಡಿದಿದ್ದಾರೆ. ಪೊಲೀಸ್ ಠಾಣೆ ಎದುರೇ ನಡೆದ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರ ವಿಳಂಬ ಧೋರಣೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರ, ಮೇ 14: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್​ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.

ಕಳ್ಳರು ಹಣದೊಂದಿಗೆ ಪರಾರಿಯಾಗುತ್ತಿದ್ದಂತೆ ರಮೇಶ್ ಅವರ ಮಗ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪೊಲೀಸ್ ಠಾಣೆ ಎದುರೇ ಇಂತಹ ಘಟನೆ ನಡೆದಿದ್ದರೂ ಪೊಲೀಸರು ತಕ್ಷಣ ಸ್ಪಂದಿಸದ ಬಗ್ಗೆ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us