ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ: ಜನರಲ್ ವಾರ್ಡ್‌ ರೋಗಿಗಳ ಪರದಾಟ

Edited By:

Updated on: Sep 18, 2026 | 7:21 AM

ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಜನರಲ್ ವಾರ್ಡ್‌ಗೆ ಮಳೆ ನೀರು ನುಗ್ಗಿದ್ದು, ಹಾಸಿಗೆಗಳು ನೆನೆದು ರೋಗಿಗಳು ಪರದಾಟ ನಡೆಸಿದ್ದಾರೆ. ಹಳೆಯ ಕಟ್ಟಡ ಪ್ರತಿ ಬಾರಿಯೂ ಸೋರಿಕೆಯಾಗುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ಮೂಲಸೌಕರ್ಯಗಳಿಲ್ಲದೆ ಚಿಕಿತ್ಸೆಗೆ ಬಂದ ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಅವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೋಲಾರ, ಸೆಪ್ಟೆಂಬರ್​​ 18: ಭಾರಿ ಮಳೆಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಅವಾಂತರಗಳೇ ನಡೆದಿವೆ. ವರುಣನ ಆರ್ಭಟಕ್ಕೆ ಆಸ್ಪತ್ರೆಯು ಜಲಾಸ್ಪತ್ರೆಯಂತಾಗಿ ಮಾರ್ಪಟ್ಟಿದ್ದು, ಜನರಲ್ ವಾರ್ಡ್‌ಗೆ ನೀರು ನುಗ್ಗಿದ ಪರಿಣಾಮ ಹಾಸಿಗೆಗಳು ಸಂಪೂರ್ಣವಾಗಿ ನೆನೆದು ಹೋಗಿವೆ. ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ತೀವ್ರ ಪರದಾಟ ನಡೆಸಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಪ್ರತಿ ಬಾರಿ ಮಳೆ ಬಂದಾಗಲೂ ಇದೇ ರೀತಿ ಸೋರಿಕೆಯಾಗುತ್ತದೆ ಎಂದು ತಿಳಿದುಬಂದಿದೆ. ಮೂಲ ಸೌಕರ್ಯಗಳ ಕೊರತೆ ಮತ್ತು ಅವ್ಯವಸ್ಥೆಯಿಂದಾಗಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಪಡೆಯಲು ಸಹ ತೊಂದರೆಯಾಗುತ್ತಿದೆ ಎಂದು ದೂರಲಾಗಿದೆ. ರೋಗಿಗಳು ಆಸ್ಪತ್ರೆಯ ಈ ಅವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More