ಕೋಲಾರದಲ್ಲಿ ಕಾಡಾನೆಗಳಿಂದ ಟೊಮೆಟೋ ಬೆಳೆ ನಾಶ
ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಕೋಲಾರ, ಡಿಸೆಂಬರ್ 08: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದಲ್ಲದೆ ಆನೆಗಳು ಮನುಷ್ಯರ ಮೇಲೂ ದಾಳಿ ಮಾಡುವ ಆತಂಕ ಉಂಟಾಗಿದೆ. ಈ ಹಿನ್ನೆಲೆ ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 08, 2025 12:25 PM

