ಕೋಲಾರದಲ್ಲಿ ಕಾಡಾನೆಗಳಿಂದ ಟೊಮೆಟೋ ಬೆಳೆ ನಾಶ

Updated on: Dec 08, 2025 | 12:27 PM

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದ್ದು, ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕೋಲಾರ, ಡಿಸೆಂಬರ್ 08: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು,  ತಮಿಳುನಾಡಿನಿಂದ ಬಂದ ಐದು ಕಾಡಾನೆಗಳ ಹಿಂಡು ಟೊಮ್ಯಾಟೊ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿದೆ. ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದಲ್ಲದೆ ಆನೆಗಳು ಮನುಷ್ಯರ ಮೇಲೂ ದಾಳಿ ಮಾಡುವ ಆತಂಕ ಉಂಟಾಗಿದೆ. ಈ ಹಿನ್ನೆಲೆ  ರೈತರು ರಾತ್ರಿ ವೇಳೆ ತೋಟಗಳಿಗೆ ಹೋಗದಂತೆ ಮತ್ತು ಅರಣ್ಯ ಪ್ರದೇಶದಲ್ಲಿ ದನಕರುಗಳನ್ನು ಮೇಯಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Dec 08, 2025 12:25 PM
Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More