ಪ್ರಿಯಕರನ ಜೊತೆ ಸೇರಿ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸೊಸೆ

Updated on: Sep 15, 2025 | 11:06 AM

ಅತ್ತೆಯ ಮುಂದೆ ಅಕ್ರಮ ಸಂಬಂಧದ ಗುಟ್ಟು ಬಯಲಾಯಿತೆಂದು ಸೊಸೆ ತನ್ನ ಪ್ರಿಯಕರನ ಜೊತೆ ಸೇರಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೋಲಾರದ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೊಸೆ ಹಾಗೂ ಆಕೆಯ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರ, ಸೆಪ್ಟೆಂಬರ್‌ 15: ತನ್ನ ಅಕ್ರಮ ಸಂಬಂಧದ (extramarital affair) ಗುಟ್ಟು ಅತ್ತೆಯ ಮುಂದೆ ಬಯಲಾಯಿತೆಂದು ಸೊಸೆ ತನ್ನ ಅತ್ತೆಯ ಮೇಲೆಯೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಕೋಲಾರದ ಶ್ರೀನಿವಾಸಪುರದ ಗುಮ್ಮಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ ಮನೆಯಲ್ಲಿ ಇಲ್ಲದಿದ್ದ ವೇಳೆ ಪ್ರಿಯಕರ ಶಶಿಕುಮಾರ್‌ನ ಜೊತೆ ಸೇರಿ ಸೊಸೆ ಅತ್ತೆಯ ಮೇಲೆ ಹಲ್ಲೆ ನಡೆಸಿದ್ದಾಳೆ. ಅತ್ತೆ ರಮಣಮ್ಮರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ