AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?

ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Oct 09, 2026 | 9:18 PM

Share

ಮುಖ್ಯಾಂಶಗಳು

  • ಪ್ರೀತಿಸಿ ವಿವಾಹವಾದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
  • ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ
  • ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

ಕೋಲಾರದಲ್ಲಿ ಪ್ರೀತಿಸಿ ಮದುವೆಯಾದ ನವೀನ್ ಮತ್ತು ಮಾನಸ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮದುವೆ ಆರತಕ್ಷತೆ ಆಯೋಜಿಸಿದ್ದಕ್ಕೆ ಹುಡುಗಿಯ ಮನೆಯವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಕೋಲಾರ, ಅಕ್ಟೋಬರ್​​ 09: ಪರಸ್ಪರ ಪ್ರೀತಿಸಿ ವಿವಾಹವಾದ ಹಿನ್ನೆಲೆ ಯುವತಿ ಕಡೆಯವರಿಂದ ಯುವಕ ಮತ್ತು ಕುಟುಂಬಸ್ಥರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮದಲ್ಲಿ ನಡೆದಿದೆ. ನವೀನ್ ಹಾಗೂ ಮಾನಸಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದನಹಳ್ಳಿ ಗ್ರಾಮದಲ್ಲಿ ಅಕ್ಟೋಬರ್​ 15ರಂದು ಆರತಕ್ಷತೆ ನಿಶ್ಚಯವಾಗಿತ್ತು. ಆದರೆ ಇಂದು ಮುಂಜಾನೆ ಯುವತಿ ಕಡೆಯವರಾದ ಅನಿಲ್, ನಾಗೇಶ್, ಶಿವ, ನರಸಿಂಹ ನಾಯ್ಕ ಅವರು ನವೀನ್ ತಂದೆ ಶಿವಪ್ಪ(50), ಚಿಕ್ಕಪ್ಪ ಸೀನಪ್ಪ(45), ಅಣ್ಣ ಚಂದ್ರು(26) ಮತ್ತು ತಮ್ಮ ಸಂದೀಪ್​ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಾಳುಗಳನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More