AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಗ್ಗಿನ ಜಡೆ, ಬಗೆಬಗೆಯ ತಿನಿಸುಗಳು! ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ

ಮೊಗ್ಗಿನ ಜಡೆ, ಬಗೆಬಗೆಯ ತಿನಿಸುಗಳು! ಮಗಳಂತೆ ಸಾಕಿದ ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: May 27, 2026 | 1:31 PM

Share

ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು.

ಕೋಲಾರ, ಮೇ 27: ತಾಲೂಕಿನ ಕಳ್ಳಿಪುರ ಗ್ರಾಮದ ರೈತ ಬಸವರಾಜ್ ಎಂಬುವರ ಕುಟುಂಬವು ತಮ್ಮ ಮನೆಯ ‘ಗೌರಿ’ ಎಂಬ ಹಸು ಗರ್ಭಧರಿಸಿದ ಹಿನ್ನೆಲೆಯಲ್ಲಿ ಅದಕ್ಕೆ ಶಾಸ್ತ್ರೋಕ್ತವಾಗಿ ಸೀಮಂತ ಕಾರ್ಯಕ್ರಮ ಆಯೋಜಿಸಿತ್ತು. ಪ್ರೀತಿಯ ಹಸುವಿಗೆ ಸುಂದರವಾದ ಮೊಗ್ಗಿನ ಜಡೆ ಹಾಕಿ, ಬಗೆಬಗೆಯ ತಿಂಡಿ-ತಿನಿಸುಗಳನ್ನು ನೀಡಿ ಸತ್ಕರಿಸಲಾಯಿತು. ಈ ವಿಶೇಷ ಆಚರಣೆಗೆ ಗ್ರಾಮದ ಮಹಿಳೆಯರನ್ನು ಆಹ್ವಾನಿಸಲಾಗಿತ್ತು. ಹಸುವಿಗೆ ಆರತಿ ಬೆಳಗಿ, ಬಂದ ಮಹಿಳೆಯರಿಗೆ ಸಾಂಪ್ರದಾಯಿಕವಾಗಿ ಅರಿಶಿನ-ಕುಂಕುಮ ಹಾಗೂ ತಾಂಬೂಲ ನೀಡಿ ಸೀಮಂತವನ್ನು ಸಂಭ್ರಮಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More