AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 05, 2025 | 6:07 PM

Share

ಶತಮಾನದ ಇತಿಹಾಸ ಇರುವ ಶಾಲೆ SSLC ಫಲಿತಾಂಶ ಪರೀಕ್ಷೆಯಲ್ಲಿ ಶೂನ್ಯ ಸಾಧನೆ ಮಾಡಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಸರ್ಕಾರಿ ಅನುದಾನಿತ ಬಿಜಿಎಂಎಲ್ (ಚಿನ್ನದ ಗಣಿ ಶಾಲೆ) ಫ್ರೌಡಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಶೂನ್ಯ. ಹೌದು..24 ಬಾಲಕರು ಹಾಗೂ 14 ಬಾಲಕಿಯರು ಸೇರಿದಂತೆ ಒಟ್ಟು 38 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು. ಆದ್ರೆ, ಒಬ್ಬರೂ ಪಾಸಾಗಿಲ್ಲ. 38ಕ್ಕೆ 38 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

ಕೋಲಾರ, (ಮೇ 05): ಶತಮಾನದ ಇತಿಹಾಸ ಇರುವ ಶಾಲೆ SSLC ಫಲಿತಾಂಶ ಪರೀಕ್ಷೆಯಲ್ಲಿ ಶೂನ್ಯ ಸಾಧನೆ ಮಾಡಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಸರ್ಕಾರಿ ಅನುದಾನಿತ ಬಿಜಿಎಂಎಲ್ (ಚಿನ್ನದ ಗಣಿ ಶಾಲೆ) ಫ್ರೌಡಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಶೂನ್ಯ. ಹೌದು..24 ಬಾಲಕರು ಹಾಗೂ 14 ಬಾಲಕಿಯರು ಸೇರಿದಂತೆ ಒಟ್ಟು 38 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು. ಆದ್ರೆ, ಒಬ್ಬರೂ ಪಾಸಾಗಿಲ್ಲ. 38ಕ್ಕೆ 38 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ.

ಕೆಜಿಎಫ್ ಚಿನ್ನದ ಗಣಿ ನಡೆಯುತ್ತಿದ್ದ ಕಾಲದಲ್ಲಿ 1899 ರಲ್ಲಿ ಆರಂಭವಾಗಿದ್ದ ಈ ಶಾಲೆ, ಬರೊಬ್ಬರಿ 126 ವರ್ಷಗಳ ಇತಿಹಾಸ ಹೊಂದಿದೆ. ರಾಜ್ಯದ ಮೊದಲ ಇಂಗ್ಲೀಷ್ ಶಾಲೆ ಎನ್ನುವ ಹೆಗ್ಗಳಿಕೆ ಸಹ ಪಡೆದುಕೊಂಡಿದೆ. ಹೀಗಾಗಿ ಈ ಶಾಲೆಯನ್ನು ಆಂಗ್ಲೋ ಆಫ್ರಿಕನ್ ಶಾಲೆ ಎಂದು ಕರೆಯಲಾಗುತ್ತಿತ್ತು.ಆದರೆ 2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಶೂನ್ಯ ಸಾಧನೆ ಮಾಡಿದೆ.

ಇನ್ನು ಇದಕ್ಕೆ ಕಾರಣ ಏನು ಎನ್ನುವುದನ್ನು ಶಾಲೆ ಮುಖ್ಯಗುರುಗಳಿಗೆ ಕೇಳಿದರೆ, ಸಿಬ್ಬಂದಿ ಕೊರತೆ ಹಾಗೂ ಮಕ್ಕಳಿಗೆ ಭಾಷೆ ಸಮಸ್ಯೆ ಎಂದಿದ್ದಾರೆ. ಈ ಕುರಿತ ಕೋಲಾರದ ನಮ್ಮ ಪ್ರತಿನಿಧಿ ರಾಜೇಂದ್ರಸಿಂಹ ನೀಡಿರುವ ಪ್ರತ್ಯಕ್ಷ ವರದಿ ಹಾಗೂ ಮುಖ್ಯೋಪಾಧ್ಯಾಯರ ಜೊತೆಗೆ ನಡೆಸಿರುವ ಮಾತುಕತೆ ಇಲ್ಲಿದೆ.

Published on: May 05, 2025 06:06 PM

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More