ಕೋಲಾರದಲ್ಲಿ ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು: ಎದ್ನೋ, ಬಿದ್ನೋ ಓಡಿದ ಜನ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಏಕಾಏಕಿ ನಡೆದ ಈ ದಾಳಿಯಿಂದ ಮೂವರು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ. ಮಕ್ಕಳು ಶಾಲೆಯೊಳಗೆ ರಕ್ಷಣೆ ಪಡೆದಿದ್ದಾರೆ. ಈ ದಾಳಿಯ ವಿಡಿಯೋ ವೈರಲ್ ಆಗಿದೆ. ಹಲವು ವರ್ಷಗಳಿಂದ ಇದ್ದ ಗೂಡನ್ನು ತೆರವುಗೊಳಿಸಲು ಗ್ರಾಮಸ್ಥರು ಮನವಿ ಮಾಡಿದ್ದರು. ಗಾಯಾಳುಗಳಿಗೆ ಬಂಗಾರಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೋಲಾರ,ಜ.2: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಭೀಮಗಾನಹಳ್ಳಿ ಗ್ರಾಮದ ಜನರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಇದೀಗ ದಾಳಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗ್ರಾಮದಲ್ಲಿ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು ಮೂರು ಜನರಿಗೆ ಗಾಯಗಾಗಿವೆ. ಇನ್ನು ಅಲ್ಲಿ ಇದ್ದ ಶಾಲೆಯ ಮಕ್ಕಳ ಮೇಲೆಯೂ ದಾಳಿ ಮಾಡಿದೆ. ಮಕ್ಕಳು ಶಾಲೆ ಒಳಗೆ ಕಿಟಿಕಿ ಬಾಗಿಲು ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಶಾಲೆಯ ಬಳಿ ಹಲವು ವರ್ಷಗಳಿಂದ ಗೂಡುಕಟ್ಟಿಕೊಂಡಿದ್ದ ಹೆಜ್ಜೇನುಗಳನ್ನು ತೆರವು ಮಾಡುವಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದಾರೆ. ಇನ್ನು ಗಾಯಾಳುಗಳು ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

