ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ
ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳನ್ನು ಶೋಧಿಸಲಾಗಿದ್ದು, ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೋಲಾರ, ಏಪ್ರಿಲ್ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು. ಈ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ರೌಡಿಗಳ ಮನೆಗಳಲ್ಲಿ ಲಾಂಗ್ ಮತ್ತು ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಕ್ಯಾನ್ಸರ್, ಅದರ ತಡೆಗಟ್ಟುವಿಕೆ, ಮುಂಚಿತವಾಗಿ ಪತ್ತೆಹಚ್ಚುವಿಕೆ, ಚಿಕಿತ್ಸೆ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ

