ಬೆಳ್ಳಂ ಬೆಳಿಗ್ಗೆ ರೌಡಿಶೀಟರ್‌ಗಳ ಬೆವರಿಳಿಸಿದ ಕೆಜಿಎಫ್​​ ಪೊಲೀಸರು: ದಾಳಿ ವೇಳೆ ಪತ್ತೆಯಾದ ಮಾರಾಕಾಸ್ತ್ರಗಳ ಜಪ್ತಿ

Edited By:

Updated on: Apr 19, 2026 | 9:19 AM

ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 10 ರೌಡಿಗಳ ಮನೆಗಳನ್ನು ಶೋಧಿಸಲಾಗಿದ್ದು, ಲಾಂಗ್, ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೋಲಾರ, ಏಪ್ರಿಲ್​​ 19: ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್‌ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳನ್ನು ಪರಿಶೀಲಿಸಲಾಗಿದೆ. ದಾಳಿ ನಡೆಸಲು ಐದು ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಐದು ಇನ್ಸ್‌ಪೆಕ್ಟರ್‌ಗಳ ತಂಡವನ್ನು ರಚಿಸಲಾಗಿತ್ತು. ಪ್ರತಿಯೊಬ್ಬ ರೌಡಿಶೀಟರ್‌ಗಳಿಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿತ್ತು. ಈ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ರೌಡಿಗಳ ಮನೆಗಳಲ್ಲಿ ಲಾಂಗ್ ಮತ್ತು ಮಚ್ಚು ಸೇರಿದಂತೆ ಹಲವು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More