ಕೋಲಾರ: ಬಸ್ ಚಲಾಯಿಸುತ್ತಿದ್ದ ವೇಳೆ ಲಘು ಹೃದಯಾಘಾತ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿತು ಪ್ರಯಾಣಿಕರ ಜೀವ

ಕೋಲಾರ: ಬಸ್ ಚಲಾಯಿಸುತ್ತಿದ್ದ ವೇಳೆ ಲಘು ಹೃದಯಾಘಾತ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿತು ಪ್ರಯಾಣಿಕರ ಜೀವ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 9:13 PM

ಇತ್ತೀಚೆಗೆ ಹೃದಯಾಘಾತವಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಇದೀಗ ಬೆಂಗಳೂರಿನಿಂದ ಮುಳಬಾಗಿಲಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ತನ್ನ ಪ್ರಾಣಕ್ಕೆ ಆಘಾತವಾದರೂ ಬಸ್​ನಲ್ಲಿದ್ದವರ ಪ್ರಾಣ ಉಳಿಸಲು ಚಾಲಕ ತಕ್ಷಣ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ, ಬಸ್ಸಿನಲ್ಲಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ.

ಕೋಲಾರ, ಆ.23: ಬಸ್​ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಲಘು ಹೃದಯಾಘಾತವಾದ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿ​ನಲ್ಲಿದ್ದ 65 ಜನ ಪ್ರಯಾಣಿಕರ ಪ್ರಾಣ ಉಳಿದಿದೆ. ಹೌದು, ಇತ್ತೀಚೆಗೆ ಹೃದಯಾಘಾತವಾಗಿ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮೊನ್ನೆಯಷ್ಟೇ ಆಟೋಚಾಲಕನಿಗೆ ಹೃದಯಘಾತವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಇದೀಗ ಬೆಂಗಳೂರಿನಿಂದ ಮುಳಬಾಗಿಲಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ತನ್ನ ಪ್ರಾಣಕ್ಕೆ ಆಘಾತವಾದರೂ ಬಸ್​ನಲ್ಲಿದ್ದವರ ಪ್ರಾಣ ಉಳಿಸಲು ಚಾಲಕ ತಕ್ಷಣ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಿ, ಬಸ್ಸಿನಲ್ಲಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ತಕ್ಷಣ ಚಾಲಕನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್​ ಮಾಡಿ