AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ಲೀಟರ್‌ಗೆ ₹10 ದರ ಏರಿಕೆಗೆ ಆಗ್ರಹ

ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ಲೀಟರ್‌ಗೆ ₹10 ದರ ಏರಿಕೆಗೆ ಆಗ್ರಹ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 19, 2026 | 12:50 PM

Share

Kolar News: ಕೋಲಾರದಲ್ಲಿ ಹಾಲು ಉತ್ಪಾದಕರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಹಾಲಿನ ಖರೀದಿ ದರವನ್ನು ಲೀಟರ್‌ಗೆ 10 ರೂಪಾಯಿಗೆ ಹೆಚ್ಚಿಸುವುದು, ಪಶು ಆಹಾರದ ಬೆಲೆ ಇಳಿಸುವುದು ಹಾಗೂ ಪ್ರೋತ್ಸಾಹಧನವನ್ನು 5 ರೂ.ನಿಂದ 7 ರೂ.ಗೆ ಏರಿಸುವಂತೆ ಆಗ್ರಹಿಸಿದರು.

ಕೋಲಾರ, ಆಗಸ್ಟ್ 19: ಹಾಲಿನ ಖರೀದಿ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೋಲಾರದಲ್ಲಿ ಹಾಲು ಉತ್ಪಾದಕರು ಬೃಹತ್ ಪ್ರತಿಭಟನೆ ನಡೆಸಿದರು. ಸಾವಿರಾರು ಹಾಲು ಉತ್ಪಾದಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್‌ಗೆ 10 ರೂ.ಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದರ ಜೊತೆಗೆ ಪಶು ಆಹಾರದ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ 5 ರೂ. ಪ್ರೋತ್ಸಾಹಧನವನ್ನು 7 ರೂ.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us