Kolar: ಸುಟ್ಟಗಾಯಗಳಿಂದ ನರಳಾಡುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದ PSI ವಿಡಿಯೋ ವೈರಲ್
ಮುಳಬಾಗಿಲಿನಲ್ಲಿ ತಾಯಿಯೇ ಪೆಟ್ರೋಲ್ ಸುರಿದು ಮಕ್ಕಳಿಗೆ ಬೆಂಕಿ ಹಚ್ಚಿದ್ದು, ಸುಟ್ಟ ಗಾಯಗಳಿಂದ ನರಳಾಡುತ್ತಿದ್ದ ಮಗುವನ್ನು ಎತ್ತುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ ಪಿ ಎಸ್ ಐ ಮಂಜುನಾಥ್
ಕೋಲಾರ: ಮುಳಬಾಗಿಲಿನಲ್ಲಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ನಿರ್ಧರಿಸಿ ಬಂದಿದ್ದ ಆಂಧ್ರ ಮೂಲದ ತಾಯಿ ಜ್ಯೋತಿ ಪೆಟ್ರೋಲ್ ಸುರಿದು ಮಕ್ಕಳಿಗೆ ಬೆಂಕಿ ಹಚ್ಚಿದ್ದಳು. ಸ್ಥಳಕ್ಕೆ ಬಂದ ಪಿಎಸ್ಐ ಮಂಜುನಾಥ್ ಕೂಡಲೇ ಸುಟ್ಟಗಾಯಗಳಿಂದ ನರಳಾಡುತ್ತಿದ್ದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇನ್ನು PSI ಮಂಜುನಾಥ್ ಮಗುವನ್ನು ಎತ್ತಿಕೊಂಡು ಹೋಗುವ ವಿಡಿಯೋ ವೈರಲ್ ಆಗುತ್ತಿದಂತೆ ಪಿಎಸ್ಐ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 07, 2022 12:15 PM