AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 15, 2025 | 9:30 PM

Share

ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಗಾಯತ್ರಿದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ಒಂದೇ ನಂಬರ್​ ಪ್ಲೇಟ್​​ ಹಾಕಿ ಸಂಚಾರ ಮಾಡುತ್ತಿದ್ದ ಎರಡು ಖಾಸಗಿ ಬಸ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಎರಡು ಖಾಸಗಿ ಬಸ್​​ಗಳನ್ನು ಕೋಲಾರ ಜಿಲ್ಲೆಯ ಕೆಜಿಎಫ್​ ಆರ್​.ಟಿ.ಓ ಕಚೇರಿಯಲ್ಲಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೋಲಾರ, ಡಿಸೆಂಬರ್​ 15: ನಗರದಲ್ಲಿ ಒಂದೇ ನಂಬರ್​ ಪ್ಲೇಟ್​​ ಹಾಕಿಕೊಂಡು ಸಂಚಾರ ನಡೆಸಿದ್ದ ಎರಡು ಖಾಸಗಿ ಬಸ್​ಗಳನ್ನು ಆರ್​ಟಿಒ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲೆಯ ಕೆಜಿಎಫ್​ ತಾಲೂಕಿನ ಕೋಟಿಲಿಂಗೇಶ್ವರ ಬಳಿ ಒಂದು ಬಸ್​ ವಶಕ್ಕೆ ಪಡೆಯಲಾಗಿದ್ದು, ಮಾಲೂರು ತಾಲೂಕಿನ ಹೊಸೂರು ರಸ್ತೆಯಲ್ಲಿ ಇನ್ನೊಂದು ಬಸ್ ವಶಕ್ಕೆ ಪಡೆಯಲಾಗಿದೆ. ಜಿಎಂಜಿ ಟ್ರಾವೆಲ್ಸ್ ಹೆಸರಿನ ಎರಡು ಖಾಸಗಿ ಬಸ್​ಗಳಿಗೆ KL05R7522 ಒಂದೇ ನಂಬರ್​​ ಪ್ಲೇಟ್ ಹಾಕಿ ಸಂಚಾರ ಮಾಡಲಾಗುತ್ತಿತ್ತು. ಇದನ್ನು ಕಂಡ ಅಧಿಕಾರಿಗಳೇ ಶಾಕ್​​​ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 15, 2025 09:28 PM
Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More