AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ವಾಲಿಬಾಲ್ ಕೋಚ್‌ ನಿರಂತರ ಅತ್ಯಾಚಾರದಿಂದ ಗರ್ಭಿಣಿಯಾದ ವಿದ್ಯಾರ್ಥಿನಿ

ಕೋಲಾರ: ವಾಲಿಬಾಲ್ ಕೋಚ್‌ ನಿರಂತರ ಅತ್ಯಾಚಾರದಿಂದ ಗರ್ಭಿಣಿಯಾದ ವಿದ್ಯಾರ್ಥಿನಿ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 23, 2026 | 9:48 AM

Share

ಕೋಲಾರದಲ್ಲಿ ಶಾಲೆಗೆ ಬರುತ್ತಿದ್ದ ವಾಲಿಬಾಲ್ ತರಬೇತುದಾರ ಶಶಿಕುಮಾರ್‌ ಎಂಬಾತ ಹೈಸ್ಕೂಲ್ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಗಿರುವ ಆರೋಪ ಕೇಳಿಬಂದಿದೆ. ಬಾಲಕಿ ಗರ್ಭಿಣಿಯಾಗಿದ್ದು, ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾದಾಗ ಘಟನೆ ಬೆಳಕಿಗೆ ಬಂದಿದೆ. ಅಜ್ಜಿಯ ದೂರಿನ ಮೇರೆಗೆ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬೇತಮಂಗಲ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಕೋಲಾರ, ನವೆಂಬರ್ 23: ಕೋಲಾರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯಲ್ಲಿ ವಾಲಿಬಾಲ್ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಶಶಿಕುಮಾರ್ ಎಂಬಾತ ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಅಪ್ರಾಪ್ತ ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ತಪಾಸಣೆಯ ವೇಳೆ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟ ನಂತರ ಈ ಹೇಯ ಕೃತ್ಯದ ಬಗ್ಗೆ ಕುಟುಂಬಸ್ಥರಿಗೆ ತಿಳಿದುಬಂದಿದೆ. ಕೂಡಲೇ ಬಾಲಕಿಯ ಅಜ್ಜಿ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಆರೋಪಿ ಶಶಿಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೇತಮಂಗಲ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಈ ಪ್ರಕರಣ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More