ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ: ಚರ್ಚೆಗೆ ಗ್ರಾಸವಾದ ಅಧಿಕಾರಿಗಳ ನಡೆ

Edited By:

Updated on: Jul 03, 2026 | 2:11 PM

SIR protocol violation: ಕೋಲಾರದ ಕುರುಬರಪೇಟೆಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯಲ್ಲಿ ಹೊಸ ಪದ್ಧತಿ ಅನುಸರಿಸಲಾಗಿದೆ. ಮನೆ ಮನೆಗೆ ಭೇಟಿ ನೀಡುವ ಬದಲು, ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ ಅರ್ಜಿಗಳನ್ನು ಭರ್ತಿ ಮಾಡಿಸಲಾಗುತ್ತಿದೆ. ಈ ಪರ್ಯಾಯ ವ್ಯವಸ್ಥೆಯು ಆಯೋಗದ ಸೂಚನೆಗಳಿಗೆ ವಿರುದ್ಧವಾಗಿದ್ದು, ಪ್ರಕ್ರಿಯೆಯ ಸಕ್ರಮತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಕೋಲಾರ, ಜುಲೈ 03: ಜಿಲ್ಲೆಯ ಕುರುಬರಪೇಟೆ ಪ್ರದೇಶದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್​) ಪ್ರಕ್ರಿಯೆಯು ಆಯೋಗದ ನಿರ್ದಿಷ್ಟ ಸೂಚನೆಗಳಿಗಿಂತ ಭಿನ್ನವಾಗಿ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಮತದಾರರ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಬೇಕೆಂಬುದು ಆಯೋಗದ ನಿಯಮ. ಆದರೆ, ಕುರುಬರಪೇಟೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್​ಓಗಳು) ಮತದಾರರನ್ನು ದೇಗುಲದ ಆವರಣಕ್ಕೆ ಕರೆಸಿ, ಅಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More