ನಡುರಾತ್ರಿ ರೌಡಿ ಶೀಟರ್ಗಳ ಬೆವರಿಳಿಸಿದ ಕೆಜಿಎಫ್ ಎಸ್ಪಿ: ಖಡಕ್ ವಾರ್ನಿಂಗ್ ಕೊಟ್ಟ ಶಿವಾಂಶು ರಜಪೂತ್
ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಎಸ್‌ಪಿ ಶಿವಾಂಶು ರಜಪೂತ್ ಅವರು ರೌಡಿಶೀಟರ್‌ಗಳ ಮನೆಗಳಿಗೆ ರಾತ್ರೋರಾತ್ರಿ ಭೇಟಿ ನೀಡಿ ಎಚ್ಚರಿಕೆ ನೀಡಿದ್ದಾರೆ. ಗಲಾಟೆ ಬಿಟ್ಟು ಶಾಂತಿಯುತವಾಗಿ ಬದುಕು ನಡೆಸುವಂತೆ ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತೆ ಸೂಚಿಸಿದ್ದಾರೆ. ಸಮಸ್ಯೆಗಳಿದ್ದರೆ ಪೊಲೀಸರಿಗೆ ತಿಳಿಸುವಂತೆ ತಿಳಿಸಿ, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ.
ಕೋಲಾರ, ಡಿಸೆಂಬರ್ 28: ಕೋಲಾರ ಜಿಲ್ಲೆ ಕೆಜಿಎಫ್ ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಸ್ಪಿ ಶಿವಾಂಶು ರಜಪೂತ್ ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರೋರಾತ್ರಿ ಆ್ಯಂಡರ್ಸನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್‌ಗಳು ಮತ್ತು ಮನೆಗಳ್ಳರ ಮನೆಗಳಿಗೆ ಭೇಟಿ ನೀಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಂತಿಯಿಂದ ಬದುಕುವಂತೆ ಮತ್ತು ಅಕ್ರಮ ಚಟುವಟಿಕೆಗಳಿಂದ ದೂರವಿರುವಂತೆ ಸೂಚಿಸಿದ ಅವರು, ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ಪೊಲೀಸರಿಗೆ ತಿಳಿಸುವಂತೆ ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 28, 2025 11:25 AM
