ಕೋಲಾರ: ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಕೋಲಾರದಲ್ಲಿ ಒಂದೇ ಬೀದಿ ನಾಯಿ 21 ಜನರಿಗೆ ಕಚ್ಚಿದ ಘಟನೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಎತ್ತಿ ತೋರಿಸಿದೆ. ಒಂದೂವರೆ ಗಂಟೆಯಲ್ಲಿ ಸಾರ್ವಜನಿಕರ ಮೇಲೆ ದಾಳಿ ಮಾಡಿದ ನಾಯಿಯನ್ನು ಅಂತಿಮವಾಗಿ ಹೊಡೆದು ಕೊಲ್ಲಲಾಗಿದೆ. ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳ ಹಾವಳಿಯಿಂದ ಸುರಕ್ಷತೆ ಕಳವಳ ತೀವ್ರಗೊಂಡಿದೆ.
ಕೋಲಾರ, ಡಿ.31: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಈ ಬೀದಿಗಳು ಸಾರ್ವಜನಿಕರಿಗೆ ಕಚ್ಚಿರುವ ಹಲವು ಪ್ರಕರಣಗಳು ವರದಿಯಾಗಿವೆ. ಇದೀಗ ಕೋಲಾರದಲ್ಲಿ ಬೀದಿ ನಾಯಿ ಕಚ್ಚಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಬಗ್ಗೆ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಒಂದುವರೆ ಗಂಟೆ ಅವಧಿಯಲ್ಲಿ ಸುಮಾರು 21 ಜನರಿಗೆ ಕಚ್ಚಿ ಗಾಯಗೊಳಿಸಿದೆ. ಈ ನಾಯಿ ಕೋಲಾರ ಆರ್.ಟಿ.ಓ ಆಫೀಸ್, ಹಳೇ ಹಂಚಿನ ಕಾರ್ಖಾನೆ ಬಡಾವಣೆ, ಬೆತ್ಲಹೆಮ್ ನಗರ, ಸೇರಿ ಹಲವೆಡೆ ಜನರ ಮೇಲೆ ದಾಳಿ ಮಾಡಿದೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, 21 ಜನರಿಗೆ ಕಚ್ಚಿರುವ ನಾಯಿಯನ್ನು ಹೊಡೆದು ಕೊಂದಿದ್ದಾರೆ. ಇನ್ನು ಬೀದಿ ನಾಯಿ ಹಾವಳಿಗೆ ಕಡಿವಾಣ ಹಾಕದ ನಗರಸಭೆ ವಿರುದ್ದ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ