ಪಾಠ ಮಾಡೋ ಟೀಚರ್ ಮೇಲೆ ವಿದ್ಯಾರ್ಥಿ ತಂದೆಯಿಂದಲೇ ಹಲ್ಲೆ
ಸತತ ಎರಡು ದಿನಗಳಿಂದ ಶಾಲೆಗೆ ಬಂದಿಲ್ಲವೆಂದು ವಿದ್ಯಾರ್ಥಿಯೊಬ್ಬನನ್ನು ಪ್ರಶ್ನಿಸಿದ್ದಕ್ಕೆ ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೌಡಪ್ಪ ಎಂಬಾತ ಶಾಲೆಗೆ ನುಗ್ಗಿ ಶಿಕ್ಷಕಿ ಮಂಜುಳ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಶಿಕ್ಷಕಿಯನ್ನು ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಲಾರ, ಸೆಪ್ಟೆಂಬರ್ 13: ಮಕ್ಕಳ ಭವಿಷ್ಯವನ್ನು ಸುಂದರವಾಗಿ ರೂಪಿಸುವ ಶಿಕ್ಷಕರು ದೇವರಿಗೆ ಸಮಾನ. ಆದ್ರೆ ಇಲ್ಲೊಬ್ಬ ವ್ಯಕ್ತಿ ಇಂತಹ ಟೀಚರ್ ಮೇಲೆಯೇ ಹಲ್ಲೆ ನಡೆಸಿದ್ದಾನೆ. ಸತತ ಎರಡು ದಿನಗಳಿಂದ ಏಕೆ ಶಾಲೆಗೆ ಬಂದಿಲ್ಲ ಎಂದು ವಿದ್ಯಾರ್ಥಿಯೋರ್ವನನ್ನು ಪ್ರಶ್ನೆ ಮಾಡಿದ್ದಕ್ಕೆ ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೋಲಾರ (Kolar) ಜಿಲ್ಲೆಯ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಮಂಜುಳಾ ಎಸ್. ಎಂಬವರ ಮೇಲೆ ವಿದ್ಯಾರ್ಥಿಯ ತಂದೆ ಚೌಡಪ್ಪ ಹಲ್ಲೆ ನಡೆಸಿದ್ದಾನೆ. ಪರಿಣಾಮ ಶಿಕ್ಷಕಿ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

