AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolara Tomato Market: ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Kolara Tomato Market: ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಭಾವನಾ ಹೆಗಡೆ
|

Updated on: Jul 11, 2026 | 1:45 PM

Share

ಲ್ಲೆಯಲ್ಲಿ ಟೊಮ್ಯಾಟೋ ಬೆಲೆ ತೀವ್ರ ಕುಸಿತ ಕಂಡಿರುವುದು ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಒಡ್ಡಳ್ಳಿ ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ ಕುಸಿತದಿಂದಾಗಿ ರೈತರು ಭಾರಿ ನಷ್ಟ ಅನುಭವಿಸಿದ್ದು, ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಅನ್ನದಾತರ ಬಾಯಿಗೆ ಮಣ್ಣು ಹಾಕಲು ಹೊರಟಿರುವ ಸರ್ಕಾರಕ್ಕೆ ಧಿಕ್ಕಾರ ಕೂಗಿದ ರೈತರು, ತಾವು ಬೆಳೆದ ಬೆಳೆಗೆ ನಿಗದಿತ ಬೆಲೆ ಸಿಗದೇ ರಸ್ತೆಗಳಲ್ಲಿ ಟೊಮ್ಯಾಟೋ ಸುರಿಯುವ ಸ್ಥಿತಿ ಬಂದಿರುವುದಾಗಿ ಅಳಲು ತೋಡಿಕೊಂಡರು.

ಕೋಲಾರ, ಜುಲೈ 11: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ತೀವ್ರ ಕುಸಿತ ಕಂಡಿರುವುದು ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಒಡ್ಡಳ್ಳಿ ಮಾರುಕಟ್ಟೆಯಲ್ಲಿ ಟೊಮ್ಯಾಟೋ ಬೆಲೆ ಕುಸಿತದಿಂದಾಗಿ ರೈತರು ಭಾರಿ ನಷ್ಟ ಅನುಭವಿಸಿದ್ದು, ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಅನ್ನದಾತರ ಬಾಯಿಗೆ ಮಣ್ಣು ಹಾಕಲು ಹೊರಟಿರುವ ಸರ್ಕಾರಕ್ಕೆ ಧಿಕ್ಕಾರ ಕೂಗಿದ ರೈತರು, ತಾವು ಬೆಳೆದ ಬೆಳೆಗೆ ನಿಗದಿತ ಬೆಲೆ ಸಿಗದೇ ರಸ್ತೆಗಳಲ್ಲಿ ಟೊಮ್ಯಾಟೋ ಸುರಿಯುವ ಸ್ಥಿತಿ ಬಂದಿರುವುದಾಗಿ ಅಳಲು ತೋಡಿಕೊಂಡರು.

ರೈತರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ, ಜಮೀನು ಹಾಗೂ ಒಡವೆಗಳನ್ನು ಅಡವಿಟ್ಟು ಟೊಮ್ಯಾಟೋ ಬೆಳೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕೆ.ಜಿ.ಗೆ 30 ರೂಪಾಯಿ ನಿಗದಿತ ಬೆಂಬಲ ಬೆಲೆ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರುಕಟ್ಟೆಗೆ ಆವಕವಾಗುವ ಟೊಮ್ಯಾಟೋ ಪ್ರಮಾಣ, ಬಾಕ್ಸ್‌ಗಳ ಬೆಲೆ ಕುರಿತು ಸರ್ಕಾರ ಸಮರ್ಪಕ ಮಾಹಿತಿ ಹೊಂದಿಲ್ಲ ಎಂದು ಆರೋಪಿಸಿದ ರೈತರು, ಕೂಡಲೇ ಮಧ್ಯಪ್ರವೇಶಿಸಿ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us