AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭ್ರಮಾಚರಣೆ ವೇಳೆ ಹೃದಯಾಘಾತ: ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಸಂಭ್ರಮಾಚರಣೆ ವೇಳೆ ಹೃದಯಾಘಾತ: ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 13, 2026 | 5:10 PM

Share

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ಸಂಭ್ರಮವು ಕ್ಷಣಾರ್ಧದಲ್ಲಿ ದುರಂತಕ್ಕೆ ತಿರುಗಿದೆ. ಕೊಲ್ಹಾರ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್ ಸದಸ್ಯ ತೌಸೀಪ್ ಗಿರಗಾಂವಿ ಅವರು, ತಮ್ಮ ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ. ಈ ಅನಿರೀಕ್ಷಿತ ಅಕಾಲಿಕ ನಿಧನವು ಕೊಲ್ಹಾರದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ವಿಜಯಪುರ, ಮೇ.13: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದ ಸಂಭ್ರಮದ ನಡುವೆಯೇ ಕರಾಳ ಘಟನೆಯೊಂದು ಸಂಭವಿಸಿದೆ. ಗೆಲುವಿನ ಉತ್ತುಂಗದಲ್ಲಿದ್ದಾಗ ಪಟ್ಟಣ ಪಂಚಾಯತ್ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಲ್ಹಾರ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್ ಸದಸ್ಯರಾದ ತೌಸೀಪ್ ಗಿರಗಾಂವಿ ಅವರು ಮೃತಪಟ್ಟ ದುರ್ದೈವಿ. ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕೆಪಿಎಲ್ (KPL) ಮಾದರಿಯ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ತೌಸೀಪ್ ವೀಕ್ಷಿಸುತ್ತಿದ್ದರು. ಆಟದ ಅಂತ್ಯದಲ್ಲಿ ತಮ್ಮ ನೆಚ್ಚಿನ ತಂಡ ಜಯಗಳಿಸುತ್ತಿದ್ದಂತೆ ಮೈದಾನಕ್ಕಿಳಿದು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಯುವ ಸದಸ್ಯರ ಅಕಾಲಿಕ ನಿಧನದಿಂದಾಗಿ ಕೊಲ್ಹಾರ ಪಟ್ಟಣದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಕ್ರೀಡೆಯ ಸಂಭ್ರಮವು ಕ್ಷಣಾರ್ಧದಲ್ಲಿ ಮೌನಕ್ಕೆ ತಿರುಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾಹಿತಿ ಲಭ್ಯವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More