AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Video: ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಅಕ್ಷತಾ ವರ್ಕಾಡಿ
|

Updated on: May 19, 2026 | 2:59 PM

Share

ಕೇರಳದ ಕೊಲ್ಲಂ ಜಿಲ್ಲೆಯ ಚಿತ್ತಾರದಲ್ಲಿ ಮಡತ್ತರದಿಂದ ಅಂಚಲ್ ಕಡೆಗೆ ಸಾಗುತ್ತಿದ್ದ ಬಸ್‌ನ ಮುಂಭಾಗದ ಟೈರ್ ಕಳಚಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಗೆ ಉರುಳಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇರಳ: ಕೊಲ್ಲಂ ಜಿಲ್ಲೆಯ ಚಿತ್ತಾರ ಎಂಬಲ್ಲಿ ಚಲಿಸುತ್ತಿದ್ದ ಬಸ್‌ನ ಮುಂಭಾಗದ ಟೈರ್ ದಿಢೀರನೆ ಕಳಚಿಕೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಮಡತ್ತರದಿಂದ ಅಂಚಲ್ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಗದೂತ ಬಸ್ ಚಿತ್ತಾರ ಸಮೀಪದ ತಿರುವಿನಲ್ಲಿ ಚಲಿಸುತ್ತಿದ್ದಾಗ ಈ ತಾಂತ್ರಿಕ ದೋಷ ಸಂಭವಿಸಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಪ್ರಮಾಣದ ಪ್ರಾಣಾಪಾಯ ತಪ್ಪಿದ್ದು, ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More