ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು

Edited By: ವಿವೇಕ ಬಿರಾದಾರ

Updated on: Sep 21, 2024 | 1:33 PM

ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯ ವೈದ್ಯರ ವಿಶೇಷ ಶಸ್ತ್ರ ಚಿಕಿತ್ಸೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ವೈದ್ಯರ ವಿಶೇಷ ಶಸ್ತ್ರ ಚಿಕಿತ್ಸೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬೆಳಗಾವಿ, ಸೆಪ್ಟೆಂಬರ್​ 21: ಕೊಲ್ಲಾಪುರದ (Kollapur) ಕನ್ಹೇರಿ ಮಠದ (Kanheri Math) ಸಿದ್ಧಗಿರಿ ಆಸ್ಪತ್ರೆಯ ವೈದ್ಯರ ವಿಶೇಷ ಶಸ್ತ್ರ ಚಿಕಿತ್ಸೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಆಶ್ಚರ್ಯವೆನಿಸಿದರೂ ಸತ್ಯ. ಇಸ್ರೇಲಿನಿಂದ ಬಂದಿದ್ದ ರೈತನಿಗೆ ಮೆದುಳಿನಲ್ಲಿ ಗಡ್ಡೆ ಬೆಳೆದಿತ್ತು. ಅದನ್ನು ಟ್ಯೂಮರ್‌ ಆಪರೇಷನ್ ಮಾಡಿ ಹೊರ ತೆಗೆಯಬೇಕಿತ್ತು. ಆಗ, ವೈದ್ಯರು ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ, ಗಡ್ಡೆ ಬೆಳೆದ ಜಾಗದ ಪಕ್ಕದಲ್ಲಿ ಮಾತ್ರ ಅರಿವಳಿಕೆ ನೀಡಿ ಸುಮಾರು 5 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಮಾಡಿ, ಯಶಸ್ವಿಯಾಗಿದ್ದಾರೆ. ಆಪರೇಷನ್​ಗೆ ಕೇವಲ 1.20 ಲಕ್ಷ ರೂ. ವೆಚ್ಚವಾಗಿದೆ.

ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ, ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು. ಸಿದ್ಧಗಿರಿ ಆಸ್ಪತ್ರೆ ಅವೇಕ್ ಕ್ರೇನಿಯೊಟಮಿ ಶಸ್ತ್ರಚಿಕಿತ್ಸೆಗೆ ಪ್ರಸಿದ್ಧಿ ಪಡೆದಿದೆ. ಈ ಹಿಂದೆ ರೋಗಿಗೆ ಐಸ್ ಕ್ರೀಮ್ ಕೊಟ್ಟು ವೈದ್ಯರು ಆಪರೇಷನ್ ಮಾಡಿದ್ದರು. ವೈದ್ಯರ ತಂಡ ಈವರೆಗೂ ಒಟ್ಟು 103 ಮೆದುಳು ಶಸ್ತ್ರ ಚಿಕಿತ್ಸೆ ಮಾಡಿದೆ. ರೋಗಿ ಕೊಳಲು ಊದುತ್ತಿರುವ ವಿಡಿಯೋವನ್ನು ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆ ಹಂಚಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Sep 21, 2024 01:32 PM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More