ಕೊಪ್ಪಳ: ಹುಲಗೆಮ್ಮನ ಹುಂಡಿಯಲ್ಲಿ 48 ದಿನದಲ್ಲಿ 1 ಕೋಟಿ 45 ಸಾವಿರ ರೂ ಕಾಣಿಕೆ ಸಂಗ್ರಹ

Edited By:

Updated on: Sep 04, 2025 | 1:46 PM

ಕೊಪ್ಪಳ ಜಿಲ್ಲೆಯ ಹುಲಗಿಯ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲಿ 48 ದಿನಗಳಲ್ಲಿ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಒಟ್ಟು 1 ಕೋಟಿ 45 ಸಾವಿರ ರೂ. ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 80 ಗ್ರಾಂ ಚಿನ್ನದ ಆಭರಣಗಳು ಮತ್ತು 40 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ರಾಜ್ಯ ಮತ್ತು ರಾಜ್ಯದ ಹೊರಗಿನಿಂದ ಭಕ್ತರು ಭೇಟಿ ನೀಡುತ್ತಾರೆ.

ಕೊಪ್ಪಳ, ಸೆಪ್ಟೆಂಬರ್ 04: ಕೊಪ್ಪಳ ತಾಲೂಕಿನ ಹುಲಗಿಯಲ್ಲಿರೇ ಐತಿಹಾಸಿಕ ಹುಲಗೆಮ್ಮ (Huligemma) ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದೆ. 48 ದಿನಗಳಲ್ಲಿ 1 ಕೋಟಿ 45 ಸಾವಿರ ರೂ. ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ 80 ಗ್ರಾಂ ಬಂಗಾರದ ಆಭರಣಗಳು, 80 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ರಾಜ್ಯ, ಹೊರ ರಾಜ್ಯದಿಂದಲೂ ಹುಲಗೆಮ್ಮ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 04, 2025 01:44 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More