ಭರತನಾಟ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವೇರಿದ ಯುವತಿ: ಇಲ್ಲಿದೆ ಮನಮೋಹಕ ನೃತ್ಯ ವಿಡಿಯೋ

Edited By:

Updated on: Dec 04, 2025 | 3:57 PM

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಓರ್ವ ಯುವತಿ ಭರತನಾಟ್ಯ ಮಾಡುತ್ತಾ ಏರಿದ್ದಾರೆ. 575 ಮೆಟ್ಟಿಲುಗಳನ್ನು 8 ನಿಮಿಷ 54 ಸೆಕೆಂಡ್​ನಲ್ಲಿ ಭರತನಾಟ್ಯ ಮಾಡುತ್ತಾ ಏರುವ ಮೂಲಕ ಸಾಧನೆ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಕೊಪ್ಪಳ, ಡಿಸೆಂಬರ್​​ 04: ಇತ್ತೀಚೆಗೆ ಯುವಕನೋರ್ವ 101 ಕೆಜಿ ತೂಕದ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವನ್ನು ಏರಿದ್ದ. ಇದೀಗ ಯುವತಿಯೋರ್ವಳು ಭರತನಾಟ್ಯ ಮಾಡುತ್ತಾ 575 ಮೆಟ್ಟಿಲುಗಳನ್ನು ಏರಿದ್ದಾಳೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿ ಹರ್ಷಿತಾ, 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾಳೆ. ಸದ್ಯ ಹರ್ಷಿತಾಳ ಭರತನಾಟ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್​ ಆಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Dec 04, 2025 03:56 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More