ಕೊಪ್ಪಳ: ಕನ್ನಡ ಬರಲ್ಲ, ಹಿಂದಿ-ತೆಲುಗು ಮಾತ್ರ ಎಂದ ಬ್ಯಾಂಕ್ ಅಧಿಕಾರಿ

Edited By:

Updated on: Jul 23, 2025 | 12:22 PM

ಗಂಗಾವತಿಯ ಕೆನರಾ ಬ್ಯಾಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಬ್ಬ ಅಧಿಕಾರಿ ಕನ್ನಡ ಭಾಷೆಯನ್ನು ಬಳಸಲು ನಿರಾಕರಿಸಿ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಮಾತ್ರ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕನ್ನಡ ತಿಳಿಯದವರಿಂದ ಬ್ಯಾಂಕ್ ಸೇವೆಗಳನ್ನು ಹೇಗೆ ಪಡೆಯುವುದು ಎಂದು ಪ್ರಶ್ನೆ ಮಾಡಿದ್ದಾರೆ.

ಕೊಪ್ಪಳ, ಜುಲೈ 23: ಜಿಲ್ಲೆಯ ಗಂಗಾವತಿಯಲ್ಲಿರುವ ಕೆನರಾ ಬ್ಯಾಂಕ್ ಬ್ರ್ಯಾಂಚ್​​ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಬ್ಬ ಅಧಿಕಾರಿ ಕನ್ನಡ (kannada) ಭಾಷೆಯನ್ನು ಬಳಸಲು ನಿರಾಕರಿಸಿ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ಮಾತ್ರ ಮಾತನಾಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಕುರಿತು ವಿಡಿಯೋ ಕೂಡ ವೈರಲ್ ಆಗಿದೆ. ಬರೀ ಹಿಂದಿ, ತೆಲುಗು ಅಂದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jul 23, 2025 12:22 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More