ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ: 10 ಕೋಟಿ ರೂ. ದುರ್ಬಳಕೆ ಆರೋಪದಲ್ಲಿ ಕ್ರಮ
Koppal Lokayukta raid: ಕೊಪ್ಪಳದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿವಿಧ ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂ. ಅಕ್ರಮ ಎಸಗಿರುವ ಆರೋಪ ಸಂಬಂಧ ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ದಾಳಿಯ ವಿಡಿಯೋ ಇಲ್ಲಿದೆ.
ಕೊಪ್ಪಳ, ಸೆಪ್ಟೆಂಬರ್ 16: ಕೊಪ್ಪಳ ನಗರಸಭೆ ಕಚೇರಿ ಸೇರಿ 5 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆದಿದೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ ನೇತೃತ್ವದಲ್ಲಿ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ಉಜ್ಚಲ, ಗುತ್ತಿಗೆದಾರರಾದ ಶಕೀಲ ಪಟೇಲ್ (ನಗರಸಭೆ ಅಧ್ಯಕ್ಷನ ಸಹೋದರ), ಪ್ರವೀಣ ಕಂದಾರಿ ಮನೆಯ ಮೇಲೆ ಕೂಡ ದಾಳಿ ನಡೆದಿದೆ. 2023-24 ನೆಯ ಸಾಲಿನ ನಗರಸಭೆಯ ಅನುದಾನದಲ್ಲಿ ದುರ್ಬಳಕೆ ಆರೋಪ ಸಂಬಂಧ ಈ ದಾಳಿ ನಡೆದಿದೆ. 336 ಕಾಮಗಾರಿಗಳಲ್ಲಿ ಸುಮಾರು 10 ಕೋಟಿ ರೂಪಾಯಿ ದುರ್ಬಳಕೆ ಮಾಡಿರುವ ಆರೋಪ ವ್ಯಕ್ತವಾಗಿತ್ತು. ಅರ್ಧಂಬರ್ಧ ಕಾಮಗಾರಿ, ಕೆಲ ಕಡೆ ಕಾಮಗಾರಿ ಮಾಡದೆ ಹಣ ಬಳಸಿರುವ ಆರೋಪ ಕೇಳಿಬಂದಿತ್ತು.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
