ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೊಪ್ಪಳ, ಆಗಸ್ಟ್ 05: ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನ ಸ್ಫೋಟಗೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಶಾಸಕ ರಾಘವೇಂದ್ರ ಹಿಟ್ನಾಳ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಘವೇಂದ್ರ ಹಿಟ್ನಾಳ್ ಅವರ ಬೆಂಬಲಿತರಾದ ಜ್ಯೋತಿ ಗೊಂಡಬಾಳ್, ತಮ್ಮ ರಾಜೀನಾಮೆ ಪತ್ರವನ್ನು ಕೊಪ್ಪಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಮರೇಗೌಡ ಬಯ್ಯಪುರಾ ಅವರಿಗೆ ಸಲ್ಲಿಸಿದ್ದಾರೆ. ಕಳೆದ 75 ವರ್ಷಗಳಿಂದಲೂ ಕೊಪ್ಪಳ ಜಿಲ್ಲಾ ಕೇಂದ್ರಕ್ಕೆ ಸಚಿವ ಸ್ಥಾನವೇ ಸಿಕ್ಕಿಲ್ಲ ಎಂಬ ಆಕ್ರೋಶವನ್ನು ಅವರು ವ್ಯಕ್ತಪಡಿಸಿದ್ದಾರೆ. ಮೂರು ಬಾರಿ ಗೆಲುವು ಸಾಧಿಸಿರುವ ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ಬೇಸರ ತಂದಿದೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Aug 05, 2026 08:42 AM
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನ ಸಸ್ಪೆಂಡ್ ಮಾಡೋಕ್ಕಾಗಲ್ಲ

