AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂ ದರೋಡೆಗೆ ಯತ್ನ, ಬೆಂಕಿ ಹೊತ್ತಿಕೊಂಡಿದ್ದರಿಂದ ಕಂಗಾಲಾಗಿ ಕಾಲ್ಕಿತ್ತ ಖದೀಮರು

ಕೊಪ್ಪಳ: ಗ್ಯಾಸ್ ಕಟರ್ ಬಳಸಿ ಎಸ್‌ಬಿಐ ಎಟಿಎಂ ದರೋಡೆಗೆ ಯತ್ನ, ಬೆಂಕಿ ಹೊತ್ತಿಕೊಂಡಿದ್ದರಿಂದ ಕಂಗಾಲಾಗಿ ಕಾಲ್ಕಿತ್ತ ಖದೀಮರು

ಶಿವಕುಮಾರ್ ಪತ್ತಾರ್
| Edited By: |

Updated on: Jun 10, 2026 | 9:29 AM

Share

ಕೊಪ್ಪಳದ ಹೊಸಪೇಟೆ ರಸ್ತೆಯ ಎಸ್‌ಬಿಐ ಎಟಿಎಂ ಕಳವು ಮಾಡಲು ಯತ್ನಿಸಿದ ಖದೀಮರು, ಗ್ಯಾಸ್ ಕಟರ್ ಮೂಲಕ ಕಟ್ ಮಾಡಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ, ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಹಣ ಸಿಗದೆ ಪರಾರಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೊಪ್ಪಳ, ಜೂನ್ 10: ನಗರದ ಹೊಸಪೇಟೆ ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಟಿಎಂ ಕೇಂದ್ರದಲ್ಲಿ ನಸುಕಿನ ಜಾವ ಭೀಕರ ದರೋಡೆ ಯತ್ನವೊಂದು ನಡೆದಿದೆ. ನಸುಕಿನ 3 ರಿಂದ 3:30 ರ ಸುಮಾರಿಗೆ ಕಳವಿಗೆ ಬಂದ ಖದೀಮರು, ಮೊದಲು ಎಟಿಎಂ ಒಳಗಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣದ ಸ್ಪ್ರೇ (Black Spray) ಹೊಡೆದು ದೃಶ್ಯಾವಳಿಗಳು ಸೆರೆಯಾಗದಂತೆ ತಡೆದಿದ್ದಾರೆ. ಬಳಿಕ ಗ್ಯಾಸ್ ಕಟರ್ ಯಂತ್ರದ ಸಹಾಯದಿಂದ ಎಟಿಎಂ ಯಂತ್ರದ ಮೊದಲ ಕಬ್ಬಿಣದ ಬಾಗಿಲನ್ನು ಕತ್ತರಿಸಲು ಮುಂದಾಗಿದ್ದಾರೆ. ಆದರೆ ಈ ವೇಳೆ ಗ್ಯಾಸ್ ಕಟರ್‌ನ ಕಿಡಿಯಿಂದಾಗಿ ಎಟಿಎಂ ಯಂತ್ರಕ್ಕೆ ದಿಢೀರನೆ ಭಾರಿ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಹಣ ದೋಚುವ ಪ್ರಯತ್ನವನ್ನು ಅರ್ಧಕ್ಕೆ ಕೈಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಎಟಿಎಂ ಕೇಂದ್ರದಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಬರುತ್ತಿರುವುದನ್ನು ಗಮನಿಸಿದ ಕಟ್ಟಡದ ಮಾಲೀಕರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೊಪ್ಪಳ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More