ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌

Edited By:

Updated on: Aug 11, 2025 | 11:58 AM

ಕೊಪ್ಪಳದ ಬಸವೇಶ್ವರ ವೃತ್ತದ ಬಳಿ ತಾಲೂಕು ಒಕ್ಕುಲತನ ಸಹಕಾರಿ ಸಂಘದ ಮುಂದೆ ಯೂರಿಯಾ ಗೊಬ್ಬರಕ್ಕಾಗಿ ಕಿಲೋಮೀಟರ್ಗೂ ಅಧಿಕ ಉದ್ದದ ಸಾಲು ಕಂಡುಬಂದಿದೆ. ಪಹಣಿ ಮತ್ತು ಆಧಾರ್ ಕಾರ್ಡ್ ಹೊಂದಿರುವ ರೈತರಿಗೆ ಮಾತ್ರ ಗೊಬ್ಬರ ವಿತರಣೆ ಮಾಡಲಾಗುತ್ತಿದೆ. ಸಾವಿರಾರು ರೈತರು ಗೊಬ್ಬರ ಪಡೆಯಲು ಕಾಯ್ದುಕೊಂಡು ನಿಂತಿದ್ದಾರೆ.

ಕೊಪ್ಪಳ, ಆಗಸ್ಟ್​ 11: ರಾಜ್ಯದಲ್ಲಿ ಯೂರಿಯಾ (urea) ಗೊಬ್ಬರದ ಅಭಾವ ಇನ್ನು ಅಂತ್ಯವಾಗಿಲ್ಲ. ಗೊಬ್ಬರಕ್ಕಾಗಿ ರೈತರು ಪರದಾಡುವಂತಾಗಿದೆ. ಇತ್ತ ಕೊಪ್ಪಳದ ಬಸವೇಶ್ವರ ವೃತ್ತದ ಬಳಿ ಇರುವ ಸಹಕಾರಿ ಸಂಘದ ಮುಂದೆ ರೈತರು ಯೂರಿಯಾಗಾಗಿ ಒಂದು ಕಿ.ಮೀ ವರೆಗೆ ಸರತಿ ಸಾಲಿನಲ್ಲಿ ನಿಂತುಕೊಂಡಿರುವುದು ಕಂಡುಬಂದಿದೆ. ಪಹಣಿ, ಆಧಾರ್ ಕಾರ್ಡ್ ಇದ್ದರೆ ಮಾತ್ರ ಯೂರಿಯಾ ವಿತರಣೆ ಮಾಡಲಾಗುತ್ತಿದೆ. ಹೀಗಾಗಿ ಯೂರಿಯಾ ಗೊಬ್ಬರ ಪಡೆಯಲು ಸಾವಿರಾರು ರೈತರು ಕಾಯ್ದುಕೊಂಡು ನಿಂತಿದ್ದಾರೆ. ಸ್ಥಳದಲ್ಲಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More