ಕೊಪ್ಪಳ: ತಬ್ಬಲಿ ಮಗುವಿನ ವಿದ್ಯಾಭ್ಯಾಸಕ್ಕೆ ಗೃಹಲಕ್ಷ್ಮಿ ಹಣ ಕೂಡಿಟ್ಟ ಅಜ್ಜಿ!
ನನ್ನ ಮೊಮ್ಮಗಳಿಗೆ ಅಪ್ಪ-ಅಮ್ಮ ಇಲ್ಲ. ಅವಳು ವಿದ್ಯಾಭ್ಯಾಸ ಮುಂದುವರಿಸಬೇಕು, ಒಳ್ಳೆಯ ಸ್ಥಾನಕ್ಕೇರಬೇಕು ಎನ್ನುವುದೇ ನನ್ನ ಕನಸು ಎಂದು ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಶಂಕ್ರಮ್ಮ ಹೇಳಿದ್ದು, ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಡುತ್ತಾ ಬಂದಿದ್ದಾರೆ. ಅಜ್ಜಿಯ ಈ ತ್ಯಾಗ ಮತ್ತು ದೂರದೃಷ್ಟಿಯ ನಿರ್ಧಾರಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಅರ್ಪಿಸಿರುವ ರೇಖಾ, ಅಜ್ಜಿಯ ಕಾರಣದಿಂದ ನನ್ನ ಭವಿಷ್ಯ ಉತ್ತಮವಾಗಲಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾಳೆ.
ಕೊಪ್ಪಳ, ಅಕ್ಟೋಬರ್ 4: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ನಿವಾಸಿ ಶಂಕ್ರಮ್ಮ ಎಂಬವರು ತಮ್ಮ ತಬ್ಬಲಿ ಮೊಮ್ಮಗಳು ರೇಖಾಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಗಮನ ಸೆಳೆದಿದ್ದಾರೆ. ಅಜ್ಜಿ ಶಂಕ್ರಮ್ಮ ಗೃಹಲಕ್ಷ್ಮೀಯಿಂದ ಬಂದ ಸಂಪೂರ್ಣ ಹಣವನ್ನು ಮೊಮ್ಮಗಳು ರೇಖಾಳ ಹೆಸರಿನ ಖಾತೆಗೆ ಜಮಾ ಮಾಡಿದ್ದಾರೆ. ತಂದೆ ತಾಯಿ ಇಲ್ಲದೆ ಬೆಳೆದ ರೇಖಾಳ ಭವಿಷ್ಯ ಮತ್ತು ವಿದ್ಯಾಭ್ಯಾಸವನ್ನು ಸುರಕ್ಷಿತಗೊಳಿಸಲು ಈ ಹಣವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
