ತುಂಗಭದ್ರಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ
ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ಹರಿದು ಬರುತ್ತಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗಿದೆ. ನದಿ ಪಾತ್ರದ ಜನರಿಗೆ ಪ್ರವಾಹದ ಭೀತಿ ಎದುರಾಗಿದ್ದು, ಎಚ್ಚರದಿಂದರಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಕೊಪ್ಪಳ, ಆಗಸ್ಟ್ 19: ಕಳೆದ ವರ್ಷ ಕ್ರೆಸ್ಟ್ ಗೇಟ್ ಮುರಿದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿದ್ದ ತುಂಗಭದ್ರಾ ಜಲಾಶಯಕ್ಕೆ ಈ ಬಾರಿ ಭಾರಿ ಮಳೆಯ ಕಾರಣ ಒಳಹರಿವು ಹೆಚ್ಚಾಗಿದೆ. ಸದ್ಯ ಜಲಾಶಯದಿಂದ ನೀರು ಬಿಡಲಾಗುತ್ತಿದ್ದು, ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ತುಂಗಭದ್ರಾ ಡ್ಯಾಂನ 7 ಗೇಟ್ಗಳಿಗೆ ಹಾನಿಯಾಗಿರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದರು. ಈ ಬಾರಿ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ಹೆಚ್ಚಿನ ಪ್ರಮಾಣದ ನೀರು ಜಲಾಶಯಕ್ಕೆ ಬಂದಿದೆ. ನೀರಿನ ಒತ್ತಡದಿಂದ ಈ 7 ಗೇಟ್ಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದರು. ಹೀಗಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವುದು ಅನಿವಾರ್ಯವೂ ಆಗಿದೆ.
ಇದನ್ನೂ ಓದಿ: ಶಾಕಿಂಗ್ ನ್ಯೂಸ್: ತುಂಗಭದ್ರಾ ಡ್ಯಾಂನ 7 ಗೇಟ್ಗಳಿಗೆ ಡ್ಯಾಮೇಜ್; ಸಚಿವ ಶಿವರಾಜ್ ತಂಗಡಗಿ
