ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು?

Edited By:

Updated on: Apr 24, 2026 | 2:34 PM

ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ.

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು, ಒಂದು ತಿಂಗಳಲ್ಲೇ ಈ ನೀರು ಸಹ ಖಾಲಿಯಾಗಲಿದೆ. ಬಳಿಕ ಜಲಾಶವೇ ಖಾಲಿ ಖಾಲಿಯಾಗಲಿದೆ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿಗೆ ಬರ ಎದುರಾಗಲಿದೆ. ಈ ಕುರಿತು ನಮ್ಮ ಪ್ರತಿನಿಧಿ ಶಿವಕುಮಾರ್ ಪತ್ತಾರ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ಇದನ್ನೂ ನೋಡಿ: ಹೊರಗೆ ಬಂದು ಮಾತಾಡ್ಲಿ: ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More