ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: ಕೇವಲ 40 ದಿನಗಳಲ್ಲಿ ಬರೋಬ್ಬರಿ 99 ಲಕ್ಷ ರೂ. ಸಂಗ್ರಹ
ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 40 ದಿನಗಳಲ್ಲಿ 99.21 ಲಕ್ಷ ರೂ. ಸಂಗ್ರಹವಾಗಿರುವುದು ಗೊತ್ತಾಗಿದೆ. ಅಷ್ಟೇ ಅಲ್ಲದೆ, ಚಿನ್ನ ಹಾಗೂ ಬೆಳ್ಳಿ ಕೂಡ ಸಂಗ್ರಹವಾಗಿದೆ. ನೂರಾರು ಜನ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದರು. ಹುಂಡಿ ಎಣಿಕೆಯ ವಿಡಿಯೋ ಇಲ್ಲಿದೆ ನೋಡಿ.
ಕೊಪ್ಪಳ, ಮಾರ್ಚ್ 13: ಕೊಪ್ಪಳ ಜಿಲ್ಲೆಯ ಹುಲಗಿ ಗ್ರಾಮದಲ್ಲಿರುವ ಸುಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 40 ದಿನಗಳಲ್ಲಿ ಬರೋಬ್ಬರಿ 99.21 ಲಕ್ಷ ರೂ. ಹಣ ಸಂಗ್ರಹವಾಗಿದೆ. ನಗದು ಹಣದ ಜೊತೆಗೆ 216 ಗ್ರಾಂ ಬಂಗಾರ, 11.5 ಕೆಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಬಂದು ದೇವಿಯ ದರ್ಶನ ಪಡೆಯುತ್ತಾರೆ.
Latest Videos