ಐತಿಹಾಸಿಕ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಮುಕ್ತಾಯ; 20 ದಿನದಲ್ಲಿ 1 ಕೋಟಿ ರೂ.ಗೂ ಅಧಿಕ ದೇಣಿಗೆ ಸಂಗ್ರಹ!

Edited By:

Updated on: Jun 21, 2026 | 3:06 PM

ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಳೆದ ಮೇ 30 ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆದಿತ್ತು. ಕೇವಲ 20 ದಿನಗಳ ಅವಧಿಯಲ್ಲಿ ಭಕ್ತರು ದೇವಾಲಯಕ್ಕೆ ಬರೋಬ್ಬರಿ 1,03,93,851 ರೂಪಾಯಿ ನಗದು ಹಣವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.

ಕೊಪ್ಪಳ, ಜೂನ್ 21: ಜಿಲ್ಲೆಯ ಪ್ರಸಿದ್ಧ ಹಾಗೂ ಐತಿಹಾಸಿಕ ಕ್ಷೇತ್ರವಾದ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ ಕಾರ್ಯ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಳೆದ ಮೇ 30 ರಂದು ಕೊನೆಯ ಬಾರಿ ಹುಂಡಿ ಎಣಿಕೆ ನಡೆದಿತ್ತು. ಕೇವಲ 20 ದಿನಗಳ ಅವಧಿಯಲ್ಲಿ ಭಕ್ತರು ದೇವಾಲಯಕ್ಕೆ ಬರೋಬ್ಬರಿ 1,03,93,851 ರೂಪಾಯಿ ನಗದು ಹಣವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.

ಹಣದ ಜೊತೆಗೆ ಭಕ್ತರು ತಮ್ಮ ಆರಾಧ್ಯ ದೇವಿಗೆ 78 ಗ್ರಾಂ ಚಿನ್ನ ಹಾಗೂ 3 ಕೆಜಿ 300 ಗ್ರಾಂ ಕಚ್ಚಾ ಬೆಳ್ಳಿಯನ್ನು ಹುಂಡಿಯಲ್ಲಿ ಹಾಕಿದ್ದಾರೆ. ಮುಜರಾಯಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಮ್ಮುಖದಲ್ಲಿ ನಡೆದ ಈ ಎಣಿಕೆ ಕಾರ್ಯದಲ್ಲಿ ನೂರಾರು ಭಕ್ತರು ಹಾಗೂ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Jun 21, 2026 03:06 PM
Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More