AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಕಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ವ್ಹೀಲ್‌ಚೇರ್ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಹೋದ ಸಂಬಂಧಿಕರು

ಕೊಪ್ಪಳ ಕಿಮ್ಸ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ವ್ಹೀಲ್‌ಚೇರ್ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಹೋದ ಸಂಬಂಧಿಕರು

ಶಿವಕುಮಾರ್ ಪತ್ತಾರ್
| Edited By: |

Updated on: Oct 19, 2026 | 11:22 AM

Share

ಕೊಪ್ಪಳದ ನೂತನ ಕಿಮ್ಸ್ ಆಸ್ಪತ್ರೆಯಲ್ಲಿ ವ್ಹೀಲ್‌ಚೇರ್ ಸಿಗದೆ ರೋಗಿಗಳು ಪರದಾಡುತ್ತಿರುವ ದೃಶ್ಯ ವೈರಲ್ ಆಗಿದೆ. ರೋಗಿಗಳನ್ನು ವೀಲ್‌ಚೇರ್‌ನಲ್ಲಿ ಕರೆದೊಯ್ಯಲು ಸಾಧ್ಯವಾಗದೆ ಸಂಬಂಧಿಕರೇ ಹೊತ್ತುಕೊಂಡು ಹೋಗುತ್ತಿರುವುದು ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಪ್ರಶ್ನೆ ಮೂಡಿಸಿದೆ. ರೋಗಿಯೊಬ್ಬರನ್ನು ಅವರ ಸಂಬಂಧಿಕರು ಹೊತ್ತೊಯ್ದಿರುವ ವಿಡಿಯೋ ಈಗ ವೈರಲ್ ಆಗಿದೆ.

ಕೊಪ್ಪಳ, ಅಕ್ಟೋಬರ್ 19: ನೂತನ ಕಿಮ್ಸ್ ಆಸ್ಪತ್ರೆಯಲ್ಲಿ ವ್ಹೀಲ್‌ಚೇರ್‌ಗಳ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ. ಆಸ್ಪತ್ರೆಗೆ ಬಂದ ರೋಗಿಗಳನ್ನು ಕರೆದೊಯ್ಯಲು ವ್ಹೀಲ್‌ಚೇರ್ ಸಿಗದೆ, ಸಂಬಂಧಿಕರೇ ಅವರನ್ನು ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಕೊಪ್ಪಳ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸ್ಥಳಾಂತರದ ಬಳಿಕ ಆಸ್ಪತ್ರೆಯನ್ನು ತಲುಪುವ ಮಾರ್ಗದಲ್ಲಿ ರೈಲ್ವೆ ಗೇಟ್‌ನಿಂದಾಗಿ ರೋಗಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಚರ್ಚೆಯಾಗಿತ್ತು. ಇದೀಗ ಆಸ್ಪತ್ರೆಯ ಒಳಗೆಯೇ ವ್ಹೀಲ್‌ಚೇರ್ ಸಿಗದೆ ರೋಗಿಗಳು ಮತ್ತು ಅವರ ಸಂಬಂಧಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.

ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಸೌಲಭ್ಯಗಳು ಸಕಾಲದಲ್ಲಿ ಸಿಗಬೇಕಿದೆ. ಆದರೆ, ವ್ಹೀಲ್‌ಚೇರ್ ಇಲ್ಲದೆ ರೋಗಿಗಳನ್ನು ಸಂಬಂಧಿಕರೇ ಹೊತ್ತುಕೊಂಡು ಹೋಗುತ್ತಿರುವ ದೃಶ್ಯ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಕುರಿತು ಪ್ರಶ್ನೆ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More