AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಶಿವಕುಮಾರ್ ಪತ್ತಾರ್
| Edited By: |

Updated on:Mar 11, 2026 | 8:01 PM

Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಹೊರವಲಯದ ಜಮೀನಿನಲ್ಲಿ ಹಾಡಹಗಲೇ ಚಿರತೆ ಕಾಣಿಸಿಕೊಂಡಿದೆ. ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದು, ಅರಣ್ಯಾಧಿಕಾರಿಗಳಿಗೆ ಚಿರತೆಯನ್ನು ಹಿಡಿಯಲು ಬೋನ್ ಅಳವಡಿಸುವಂತೆ ಮನವಿ ಸಲ್ಲಿಸಿದ್ದಾರೆ. ತುಂಗಭದ್ರಾ ನದಿಯ ಅಂಚಿನಲ್ಲಿರುವ ಈ ಪ್ರದೇಶದಲ್ಲಿ ಚಿರತೆ ಆಗಮನದಿಂದ ಸುರಕ್ಷತೆಯ ಕುರಿತು ಆತಂಕ ಹೆಚ್ಚಿದೆ.

ಕೊಪ್ಪಳ, ಮಾರ್ಚ್​​ 11: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಹಾಡಹಗಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ ಹಗಲು ಹೊತ್ತಿನಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಮಲ್ಲಾಪುರ ಗ್ರಾಮವು ತುಂಗಭದ್ರಾ ನದಿಯ ಸಮೀಪದಲ್ಲಿರುವ ಕಾರಣ, ನದಿಯ ಆಸುಪಾಸಿನ ಪ್ರದೇಶಗಳಿಂದ ಚಿರತೆ ಬಂದಿರಬಹುದೆಂದು ಅಂದಾಜಿಸಲಾಗಿದೆ. ತಮ್ಮ ಗ್ರಾಮದಲ್ಲಿ ಚಿರತೆಯ ಸಂಚಾರ ಹೆಚ್ಚಾಗಿರುವುದರಿಂದ, ಜನ ಜಾನುವಾರುಗಳಿಗೆ ಅಪಾಯವಾಗಬಹುದು ಎಂದು ಗ್ರಾಮಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಿದ್ದು, ಚಿರತೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಬೋನ್ ಅಳವಡಿಸುವಂತೆ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 11, 2026 08:00 PM
Follow Us