ನಾವು ಸತ್ರೂ ಲಸಿಕೆ ಹಾಕಿಸಿಕೊಳ್ಳಲ್ಲ; ವಿಡಿಯೋ ಫುಲ್ ವೈರಲ್

ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಕೊಪ್ಪಳ: ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಇರುವ ಅಸ್ತ್ರವೆಂದರೆ ಅದು ಕೊರೊನಾ ಲಸಿಕೆ. ಆದರೆ ಕೊರೊನಾ ಲಸಿಕೆ ಪಡೆಯಲು ವ್ಯಕ್ತಿಯೊಬ್ಬರು ಹಿಂದೇಟು ಹಾಕಿರುವ ಘಟನೆ ಕೊಪ್ಪಳ ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ನಡೆದಿದೆ. ಲಸಿಕೆ ಪಡೆಯುವುದರಿಂದ ಏನು ಪ್ರಯೋಜನ ಅಂತ ವ್ಯಕ್ತಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಲಸಿಕೆ ಪಡೆಯಲು ವ್ಯಕ್ತಿ ನಿರಾಕರಣೆ ಮಾಡಿದ್ದು, ಗಲಾಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ನಾವು ಹೀಗೆ ಸಾಯಲಿ, ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಅಂತ ವ್ಯಕ್ತಿ ನಿರಾಕರಣೆ ಮಾಡಿದ್ದಾರೆ. ಯಾವ ಕೊರೊನಾ ಇಲ್ಲ, ಏನಿಲ್ಲ ಎಂದು ಅಧಿಕಾರಿಗಳೊಂದಿಗೆ ವ್ಯಕ್ತಿ ವಾದಕ್ಕಿಳಿದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಪ್ಪಳದಲ್ಲಿ ಮಾತ್ರವಲ್ಲ ರಾಜ್ಯದ ಬಹುತೇಕ ಜನರು ಕೊರೊನಾ ಲಸಿಕೆ ಪಡೆಯಲು ಹಿಂದೆ ಸರಿಯುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮವಿಲ್ಲ ಅಂತ ಹೇಳಿದ್ದರೂ ಜನರು ಮಾತ್ರ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

Click on your DTH Provider to Add TV9 Kannada